ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರ ರಾಜ್ಯ ಸರ್ಕಾರದ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.
ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿಗೆ ಕೇಂದ್ರ ಸರ್ಕಾರದ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿತ್ತು. ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ 3 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಹೆಚ್ಚಳವು ಜನವರಿ 1, 2022 ರಿಂದ ಜಾರಿಗೆ ಬರಲಿದೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನೌಕರರಿಗೂ ಹೆಚ್ಚಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ನೌಕರರಿಗೂ ಜನವರಿ 1 ರಿಂದ ಜಾರಿಗೆ ಬರುವಂತೆ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement