ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆಯ ಸಾವು, ಐವರಿಗೆ ಗಾಯ

ವಿಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವಿಗೀಡಾದ ಘಟನೆ ಇಲ್ಲಿನ ಪೊಲೀಸ್ ಪರೇಡ್ ಮೈದಾನದ ಬಳಿ ಮಂಗಳವಾರ ನಡೆದಿದೆ. ಅಲ್ಲದೆ, ಐವರಿಗೆ ಗಂಭೀರ ಗಾಯಗಳಾಗಿವೆ.

ಸ್ಥಳೀಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಟೋ ಚಾಲಕ ಸಚಿನ ರಾಠೋಡ್‌ ಹಾಗೂ ಇತರ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ.
ಮದಬಾವಿ ತಾಂಡಾದ ಆಟೋ ಚಾಲಕನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಾಲಕನ ಸ್ಥಿತಿ ಗಂಭೀರವಾಗಿದೆ. ಘಟನೆಯಿಂದ ಕೆಲ ಕಾಲ ಸಂಚಾರ ಬಂದ್ ಆಗಿತ್ತು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement