ಹಾವೇರಿ : ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

ಹಾವೇರಿ: ಭಾರೀ ಗಾಳಿ ಮಳೆಗೆ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿಯಲ್ಲಿ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬಳು ಮೃತಪಟ್ಟ ದುರ್ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆ ಪಟ್ಟಣದ ಮುಮ್ತಾಜ್ (42) ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದಿದೆ. ಗಾಳಿಯ ರಭಸಕ್ಕೆ ಮನೆಯ ಮೇಲ್ಛಾವಣಿಯ ಮೇಲಿನ ಸಿಮೆಂಟ್ ಇಟ್ಟಿಗೆ ಮಹಿಳೆ ತಲೆ ಮೇಲೆ ಬಿದ್ದಿದ್ದರಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮಳೆ ಗಾಳಿಯಿಂದಾಗಿ ಪಟ್ಟಣದ ಅನೇಕ ಕಡೆಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ಉರುಳಿವೆ. ಸ್ಥಳಕ್ಕೆ ಗುತ್ತಲ ಠಾಣೆ ಪಿಎಸ್‍ಐ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

4.7 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾರವಾರ : ಭಾರತದ ನೌಕಾಪಡೆಗೆ ಸ್ವದೇಶಿ ನಿರ್ಮಿತ ಬಹುಪಯೋಗಿ ನೌಕೆ ‘ಐಎನ್‌ಎಸ್‌ ಸಮರ್ಥಕ್’ ಸೇರ್ಪಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement