ಅನಿಲ್ ದೇಶಮುಖ್ ಬಂಧನ: ಏಪ್ರಿಲ್ 11 ರವರೆಗೆ ಸಿಬಿಐ ಕಸ್ಟಡಿಗೆ ಕಳುಹಿಸಿದ ಕೋರ್ಟ್‌

ಮುಂಬೈ: ವಿಶೇಷ ನ್ಯಾಯಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಏಪ್ರಿಲ್ 11 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ದೇಶಮುಖ್ ಅವರನ್ನು ಬುಧವಾರ ಬೆಳಗ್ಗೆ ಸಿಬಿಐ ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯವು ದೇಶಮುಖ್ ಅವರನ್ನು ಬಂಧನಕ್ಕೊಳಪಡಿಸಿತ್ತು. ಆ ಬಳಿಕ ಭ್ರಷ್ಟಾಚಾರ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲು ಮುಂಬೈ ನ್ಯಾಯಾಲಯವು ಸಿಬಿಐಗೆ ಅವಕಾಶ ನೀಡಿತ್ತು. ಆದರೆ ಅನಿಲ್ ದೇಶಮುಖ್ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ದೇಶಮುಖ್‌ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್‌ವೀರ್‌ ಸಿಂಗ್‌ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಅವರನ್ನು ಗೃಹಸಚಿವ ಸ್ಥಾನದಿಂದ ವಜಾ ಮಾಡಲಾಗಿತ್ತು. ಬಳಿಕ ಈ ಆರೋಪ ಪರಿಗಣಿಸಿ ಕಳೆದ ವರ್ಷ ನವೆಂಬರ್‌ನಲ್ಲಿ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಅಲ್ಲದೆ, ಈ ಪ್ರಕರಣದಲ್ಲಿ ಮುಂಬೈನ ಸಚಿನ್‌ ವಾಝೆ ಹಾಗೂ ದೇಶಮುಖ ಅವರ ಇಬ್ಬರು ಸಹಾಯಕರನ್ನೂ ವಶಕ್ಕೆ ಪಡೆಯಲಾಗಿದೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement