ಆರೋಗ್ಯದಲ್ಲಿ ಏರುಪೇರು: ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ದ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಸಂಜೆ ಅವರು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈಅವರು ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರದ ತನಕ ನಿಗಾದಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement