ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬಿಸಗೋಡ ಗ್ರಾಮದ ಹೊರವಲಯದಲ್ಲಿ ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಸತ್ತಿರುವ ಘಟನೆ  ವರದಿಯಾಗಿದೆ.
ಘಟನೆಯಲ್ಲಿ ಚಿರತೆಯ ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸತ್ತಿವೆ. ಮಂಗಳವಾರ ಬೆಳಗ್ಗೆ ಚಿರತೆಯ ಮೃತದೇಹ ಸಾರ್ವಜನಿಕರಿಗೆ ಕಂಡಿದೆ. ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಯ ಸುಮಾರಿಗೆ ಚಿರತೆ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಯಲ್ಲಾಪುರದ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಚಿರತೆ ಕಳೇಬರಹ ದಹನ ಮಾಡಲಾಯಿತು. ಘಟನೆ ಸಂಬಂಧ ಯಲ್ಲಾಪುರ ಅರಣ್ಯ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement