ಕಾರ್-ಬೈಕ್‌ ಡಿಕ್ಕಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋದ ಮದುಮಗ ಸೇರಿ ಇಬ್ಬರು ಸಾವು

posted in: ರಾಜ್ಯ | 0

ಕಲಬುರಗಿ : ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಮೃತಪಟ್ಟವರನ್ನು ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ ( 30) ಎಂದು ಗುರುತಿಸಲಾಗಿದೆ.
ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಸಂಬಂಧಿಕರಿಗೆ ಮದುವೆ ಆಮಂತ್ರಣ ಪತ್ರ ಕೊಡಲು ಜೇರಟಗಿಯತ್ತ ತೆರಳುತ್ತಿದ್ದರು ಎನ್ನಲಾಗಿದೆ. ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ಕಾರು ಎದುರಿಗೆ ಬಂದ ಬೈಕ್‌ ಗೆ ಡಿಕ್ಕಿ ಹೊಡೆಯಿತು. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

ಓದಿರಿ :-   ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ
advertisement

ನಿಮ್ಮ ಕಾಮೆಂಟ್ ಬರೆಯಿರಿ