ಗಮನಿಸಿ…ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ; ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ (2nd PUC) ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಆದರೆ ವಿಷಯವಾರು ಪರೀಕ್ಷೆ ದಿನಾಂಕದಲ್ಲಿ ಮಾತ್ರ ಅದಲು ಬದಲಾವಣೆಯಾಗಿದ್ದು, ಕೆಲ‌ ತಾಂತ್ರಿಕ ಕಾರಣಗಳಿಂದ ಪರೀಕ್ಷೆ ದಿನಾಂಕದಲ್ಲಿ ಮಾತ್ರ ಬದಲಾವಣೆಯಾಗಿದೆ ಎಂದು ತಿಳಿಸಲಾಗಿದೆ.
ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರ ವರೆಗೆ ಪರೀಕ್ಷೆ ನಡೆಯಲಿದೆ. ವಿಷಯಗಳ ದಿನಾಂಕವಷ್ಟೆ ಬದಲಾಗಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಈ ಬದಲಾವಣೆಯನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ.
ತಮ್ಮೆಲ್ಲರ ಗಮನಕ್ಕೆ ಈ ಹಿಂದೆ ಪ್ರಕಟಿಸಿರುವ ಯಾವುದೇ ವೇಳಾ ಪಟ್ಟಿಯನ್ನು ಅನುಸರಿಸದೆ ದಿನಾಂಕ 06-04-2022ರಂದು ಪ್ರಕಟಿಸಿರುವ ಅಂತಿಮ ವೇಳಾಪಟ್ಟಿಯನ್ನು ಮಾತ್ರ ಅನುಸರಿಸಬೇಕಾಗಿ ದ್ವಿತೀಯ ಪಿಯುಸಿ ಬೋರ್ಡ್​ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಬದಲಾದ ಪರಿಷ್ಕೃತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ

22-04-2022, ಶುಕ್ರವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

23-04-2022, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

25-04-2022, ಸೋಮವಾರ – ಅರ್ಥಶಾಸ್ತ್ರ

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

26-04-2022, ಮಂಗಳವಾರ – ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನ ಶಾಸ್ತ್ರ, ಮೂಲ ಗಣಿತ

27-04-2022, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

28-04-2022, ಗುರುವಾರ – ಕನ್ನಡ, ಅರೇಬಿಕ್

04-05-2022, ಬುಧವಾರ – ಭೂಗೋಳಶಾಸ್ತ್ರ, ಜೀವಶಾಸ್ತ್ರ

05-05-2022, ಗುರುವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೈಬೊಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

06-05-2022, ಶುಕ್ರವಾರ – ಇಂಗ್ಲೀಷ್

10-05-2022, ಮಂಗಳವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

14-05-2022, ಶನಿವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

17-05-2022, ಮಂಗಳವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

18-05-2022, ಬುಧವಾರ – ಹಿಂದಿ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement