ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್, ಯಾವುದೇ ಧರ್ಮಸೂಚಕ ವಸ್ತ್ರ ಧರಿಸುವಂತಿಲ್ಲ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿಯಲ್ಲೇ  ದ್ವಿತೀಯ ಪಿಯುಸಿ ಪರೀಕ್ಷೆಗೂ ಕೂಡಾ ವಿದ್ಯಾರ್ಥಿಗಳು ಹಿಜಾಬ್ (Hijab) ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಹೊರಡಿಸುವ ಆದೇಶವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ನಿಷೇಧದ ಕುರಿತು ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಲಿದೆ. ಈ ಆದೇಶದ ಅನ್ವಯ ಯಾವುದೇ ಧರ್ಮ ಸೂಚಕ ವಸ್ತ್ರಗಳನ್ನು ಪರೀಕ್ಷೆ ವೇಳೆ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
ರಾಜ್ಯದಲ್ಲೆಡೆಯ ಜಿಲ್ಲಾ ಮಟ್ಟದ ಕಾಲೇಜುಗಳಲ್ಲಿ ಶೇ. 90ರಷ್ಟು ಸಮವಸ್ತ್ರ ಇದೆ. ಶೇ. 10ರಷ್ಟು ಕಾಲೇಜುಗಳಲ್ಲಿ ಮಾತ್ರ ಇಲ್ಲ. ಆದಾಗ್ಯೂ ಧರ್ಮ ಸೂಚಕ ವಸ್ತ್ರಗಳನ್ನು ವಿದ್ಯಾರ್ಥಿಗಳು ಧರಿಸಿ ಕಾಲೇಜಿಗೆ ಬರಬಾರದು. ಈ ನಿಯಮವನ್ನು ಆಯಾ ಕಾಲೇಜುಗಳ ಎಸ್‌ಡಿಎಂಸಿಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

ಈ ನಿರ್ಧಾರವನ್ನು ತಾವು ಕೋರ್ಟ್‌ ತೀರ್ಪಿನ ಅನ್ವಯವೇ ಕೈಗೊಂಡಿದ್ದೇವೆ ಎಂದು ಹೇಳಿದ ಸಚಿವರು, ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇರುವ ಕಾನೂನನ್ನೇ ಏಪ್ರಿಲ್ 22ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ತಿಳಿಸಿದರು. ದ್ವಿತೀಯ ಪಿಯು ಪರೀಕ್ಷೆ ಏಪ್ರಿಲ್ 22ರಿಂದ ಮೇ 18ರ ವರೆಗೆ ನಡೆಯಲಿದೆ.

ಪ್ರಮುಖ ಸುದ್ದಿ :-   ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ

ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 17ರಂದು ಹೋಮ್ ಸೈನ್ಸ್,
ಮೇ 18ರಂದು ಹಿಂದಿ ಪರೀಕ್ಷೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement