ಹಂಪಿ ಕನ್ನಡ ವಿವಿಯಿಂದ ಮೂವರು ಸಾಧಕರಿಗೆ ನಾಡೋಜ ಪ್ರಶಸ್ತಿ ಪ್ರಕಟ

posted in: ರಾಜ್ಯ | 0

ಹೊಸಪೇಟೆ (ವಿಜಯನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕೊಡಮಾಡುವ ನಾಡೋಜ ಪ್ರಶಸ್ತಿಗೆ ಸಾಹಿತಿಗಳಾದ ಡಾ. ಭಾಷ್ಯಂ ಸ್ವಾಮಿ, ಗೊ.ರು.ಚನ್ನಬಸಪ್ಪ, ಪ್ರೊ.ಟಿ. ವೆಂಕಟಾಚಲ ಶಾಸ್ತ್ರಿ ಅವರಿಗೆ ಆಯ್ಕೆ ಮಾಡಲಾಗಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ.ರಮೇಶ, ಏ.12ರಂದು ಸಂಜೆ 5:30ಕ್ಕೆ ವಿಶ್ವ ವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೂವರಿಗೂ ನಾಡೋಜ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಾನಪದ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗೊ.ರು.ಚನ್ನಬಸಪ್ಪ, ಸಂಸ್ಕೃತದಿಂದ ಕನ್ನಡಕ್ಕೆ ಹಲವು ಪುಸ್ತಕಗಳನ್ನು ಅನುವಾದ ಮಾಡಿರುವ ಸಂಸ್ಕೃತ ತಜ್ಞ ಮೈಸೂರಿನ ಡಾ. ಭಾಷ್ಯಂ ಸ್ವಾಮಿ ಹಾಗೂ ಶಾಸ್ತ್ರ ಸಾಹಿತ್ಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಪ್ರೊ.ಟಿ. ವೆಂಕಟಾಚಲ ಶಾಸ್ತ್ರಿ ಅವರಿಗೆ ವಿಶ್ವವಿದ್ಯಾಲಯವು ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ತಿಳಿಸಿದರು.
ಅಲ್ಲದೆ, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಚಿತ್ರದುರ್ಗದ ಶ್ರೀ ಮುರುಘಾ ಶರಣರು, ಬಿ.ಎಸ್.ಪುಟ್ಟಸ್ವಾಮಿ, ಕಲಕುಳಿ ವಿಠ್ಠಲ ಹೆಗ್ಡೆ ಅವರಿಗೆ ಡಿಲೀಟ್ ಪದವಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಓದಿರಿ :-   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

advertisement

ನಿಮ್ಮ ಕಾಮೆಂಟ್ ಬರೆಯಿರಿ