ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ: ಸಿಎಂ ಬೊಮ್ಮಾಯಿ

ನವದೆಹಲಿ: ಈ ಸಲದ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಕೇಂದ್ರದ ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇನೆ, ಎಲ್ಲರಿಂದಲೂ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು, ಗುರುವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಅದರಲ್ಲಿ ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೆಲವು ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ:
ಇದೇ ವೇಳೆ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ವರಿಷ್ಠರು ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕಾರಿಣಿ ಸಭೆಗೆ ಬಂದಾಗ ಈ ಬಗ್ಗೆ ಉಳಿದ ವಿಚಾರಗಳನ್ನು ಮಾತನಾಡುವುದಾಗಿ ತಿಳಿಸಿದ್ದಾರೆ. ಕಾರ್ಯಕಾರಿಣಿಯಲ್ಲಿ ವರಿಷ್ಠರು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement