ಮುಂಬೈನಲ್ಲಿ XE ಕೊರೊನಾ ವೈರಸ್‌ ತಳಿ ಪತ್ತೆಯಾಗಿಲ್ಲ: ಕೇಂದ್ರ ಸರ್ಕಾರ

ಮುಂಬೈ: ಕೊರೊನಾ ವೈರಸ್‌ ಸೊಂಕಿನ ಹೊಸ ರೂಪಾಂತರಿ ಪತ್ತೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಸೋಂಕಿನ ಒಮಿಕ್ರಾನ್‌ ಹೈಬ್ರಿಡ್‌ ರೂಪಾಂತರಿಯಾಗಿರುವ ಎಕ್ಸ್‌ಇ (XE) ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (BMC) ವರದಿ ಮಾಡಿದ ಹಿನ್ನಲೆ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದ ಬಳಿಕ ಎಚ್ಚತ್ತ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣ ಸ್ವೀಕರಿಸಿಲ್ಲ. ಆದ್ದರಿಂದ ಒಮಿಕ್ರಾನ್‌ ಹೈಬ್ರಿಡ್‌ ರೂಪಾಂತರಿ XE ಪತ್ತೆಯಾಗಿರುವುದು ಕಂಡುಬಂದಿಲ್ಲ ಎಂದು ಹೇಳಿದೆ.

ಮುಂಬೈನಲ್ಲಿ XE ಕೊರೊನಾ ತಳಿ ಪತ್ತೆಯಾಗಿದೆ ಎಂದು ಹೇಳಿದ್ದ ವರದಿಯನ್ನು ಕೇಂದ್ರ ಸರ್ಕಾರದ ಅಧಿಕಾರಿಗಳು ಅಲ್ಲಗಳೆದಿದ್ದಾರೆ. XE ತಳಿ ಪತ್ತೆಯಾಗಿರುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತದ ಸಾರ್ಸ್ ಕೋವ್-2 ಜೆನೆಟಿಕ್ಸ್ ಕಾನ್ಸೊರ್ಟಿಯಮ್‍ನ (INSACOG) ಜಿನೋಮ್ ಸೀಕ್ವೆನ್ಸಿಂಗ್ ತಜ್ಞರು ವಿವರವಾಗಿ ಪರಿಶೀಲನೆ ನಡೆಸಿದ್ದು, ಮಾದರಿಯಲ್ಲಿ ಪತ್ತೆಯಾಗಿರುವ ತಳಿ ಜಿನೋಮ್ ರಚನೆಗಳಿಗೂ ಕೊರೊನಾ ವೈರಸ್‌ ಒಮಿಕ್ರಾನ್‌ ಹೈಬ್ರಿಡ್‌ ರೂಪಾಂತರ XE ತಳಿಯ ರಚನೆಗಳೂ ಹೋಲಿಕೆಯಾಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಅತ್ಯಧಿಕ ಅಪಾಯದ ಮಟ್ಟ 6ರ ವಿರುದ್ಧ ರಕ್ಷಣೆಗಾಗಿ ದೇಶದ ಅತ್ಯಂತ ಹಗುರ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ ಡಿ ಆರ್‌ ಡಿ ಒ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement