ಶಿವಮೊಗ್ಗ: ಹೂ ಕಟ್ಟಲು ತೆರಳುತ್ತಿದ್ದ ಯುವಕನ ಮೇಲೆ 6 ಜನರಿಂದ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ನನಪು ಮಾಸುವ ಮುನ್ನವೇ ನಗರದಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ,
ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ ನಡೆಸಿದ್ದಾರೆ.

ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿರುವ ಮಧು ಗುರುವಾರ ಮಧ್ಯಾಹ್ನ ನ್ಯೂ ಮಂಡ್ಲಿಯ 1ನೇ ಕ್ರಾಸ್‌ನಲ್ಲಿ ಹೂವು ಕಟ್ಟಲು ತೆರಳುತ್ತಿದ್ದಾಗ ಹಲ್ಲೆ ಮಾಡಲಾಗಿದೆ. ಈ ವೇಳೆ ಬೈಕ್‌ನಲ್ಲಿ ಬಂದವರು ಹಾಗೂ ಸ್ಥಳದಲ್ಲಿದ್ದ ಯುವಕರು ಸೇರಿದಂತೆ ಆರು ಜನ ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಕಿಡ್ನಿ ಆಪರೇಷನ್ ಮಾಡಿಕೊಂಡಿರುವ ಯುವಕ ಮಧುವಿಗೆ, ಕಿಡ್ನಿ ಆಪರೇಷನ್ ಮಾಡಿದ ಜಾಗದಲ್ಲಿಯೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಗಾಯಾಳು ಮಧುವಿಗೆ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement