ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಿಂದ ಮಂಗಳೂರು, ಮೈಸೂರಿಗೆ  ವಿಮಾನ ಸೇವೆ ಆರಂಭ: ಪ್ರಹ್ಲಾದ ಜೋಶಿ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ವಿಮಾನ ಸೇವೆ ಮೇ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಇಂಡಿಗೋ ಸಂಸ್ಥೆ ಮೇ 1ರಿಂದ ಮಂಗಳೂರಿಗೆ ವಿಮಾನ ಸಂಚಾರ ಆರಂಭಿಸಲಿದೆ ಹಾಗೂ ವಾರದಲ್ಲಿ 4 ದಿನ ಹುಬ್ಬಳ್ಳಿಯಿಂದ ಮಂಗಳೂರಿಗೆ ಸಂಚಾರ ಮಾಡಲಿದೆ. ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ತಾವು ಇಂಡಿಗೋ ವಿಮಾನಯಾನ ಸಂಸ್ಥೆಗೆ ಈ ಕುರಿತು ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿದ ಇಂಡಿಗೋ ವಿಮಾನಯಾನ ಸಂಸ್ಥೆಯವರು ಇದೇ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಅಲ್ಲದೆ, ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿಯವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಓದಿರಿ :-   ಧಾರವಾಡದಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು, 11 ಜನರಿಗೆ ಗಾಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ