ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ ಮಾಡಲಿದ್ದಾರೆ. ಜೆ.ಎಸ್.ಎಸ್‌ನ ಕಾರ್ಯದರ್ಶಿ ಹಾಗೂ ಎಸ್.ಡಿ.ಎಂ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ನ. ವಜ್ರಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜೆ.ಎಸ್.ಎಸ್ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement