ವಿದ್ಯುತ್ ಶಾರ್ಟ್ ಸರ್ಕ್ಯೂಟಿನಿಂದ ಬೆಂಕಿ ಅವಘಡ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

ವಿಜಯನಗರ: ಎಸಿ ಸ್ಫೋಟದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ವೆಂಕಟ್ ಪ್ರಶಾಂತ್​ (42) ಪತ್ನಿ ಚಂದ್ರಕಲಾ (38 ) ಹಾಗೂ ಮಕ್ಕಳಾದ ಅರ್ದ್ವಿಕ್(16) ಮತ್ತು ಪ್ರೇರಣಾ (8) ಎಂದು ಗುರುತಿಸಲಾಗಿದೆ.

ರಾಘವೇಂದ್ರ ಶೆಟ್ಟಿ ಎನ್ನುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ಮತ್ತು ಎ.ಸಿ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ. ಆಗ ರಾಘವೇಂದ್ರ ಶೆಟ್ಟಿ ಮತ್ತ ಅವರ ಪತ್ನಿ ರಾಜಶ್ರೀ ಅವರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ಆದರೆ, ಮನೆಯ ಮಹಡಿಯ ಮೇಲೆ ಮಲಗಿ ನಿದ್ರಿಸುತ್ತಿದ್ದ ರಾಘವೇಂದ್ರ ಶೆಟ್ಟಿಯವರ ಮಗ ವೆಂಕಟ್​ ಪ್ರಶಾಂತ್​ ಮತ್ತು ಅವರ ಪತ್ನಿ ಮತ್ತು ಮಕ್ಕಳು ಹೊರಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಶುಕ್ರವಾರ ಬೆಳಗಿನ ಜಾವ ಅವಘಡ ನಡೆದಿದೆ ಎನ್ನಲಾಗಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎಸಿ ಸ್ಫೋಟದಿಂದ ವಿಷಾನಿಲ ಸೋರಿಕೆಯಿಂದ ಮೃತಪಟ್ಟಿದ್ದಾರೆಯೋ ಅಥವಾ ಬೆಂಕಿ ಹೊಗೆಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement