ಟೊರೊಂಟೋ: ಕೆನಡಾದ ಟೊರೊಂಟೊ ಬಳಿಯ ಶೆರ್ಬೋರ್ನ್ ಸಬ್ ವೇ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ವಿದ್ಯಾರ್ಥಿಯನ್ನು 21 ವರ್ಷದ ಕಾರ್ತಿಕ್ ವಾಸುದೇವ ಎಂದು ಗುರುತಿಸಲಾಗಿದೆ.
ಕೆನಡಾದ ಟೊರೊಂಟೊದ ಸೆನೆಕಾ ಕಾಲೇಜಿನ ಮೊದಲ ಸೆಮಿಸ್ಟರ್ ಮಾರ್ಕೆಟಿಂಗ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿ ವಾಸುದೇವಗೆ ಗುಂಡು ಹಾರಿಸಿದ್ದು ಯಾರು ಎಂದು ತಿಳಿದುಬಂದಿಲ್ಲ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕಾರಿಕ್ ಅವರನ್ನು ಆಸ್ಪತ್ರೆಗೆ ಒಯ್ದರೂ ಪ್ರಯೋಜನವಾಗಲಿಲ್ಲ.
advertisement
9535127775 / 9901837775 / 6364528715 / 08362775155 / https://icsmpucollege.com/
ಘಟನೆ ನಡೆದ ಸ್ಥಳದ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಹಾಗೂ ಪ್ರತ್ಯಕ್ಷದರ್ಶಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಈವರೆಗೆ ಹಂತಕರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೊಲೆ ಹಿಂದಿನ ಕಾರಣಗಳು ಗೊತ್ತಾಗಿಲ್ಲ. ಭಾರತೀಯ ವಿದ್ಯಾರ್ಥಿಯನ್ನು ಹತ್ಯೆಗೈದಿರುವುದು ಅತ್ಯಂತ ಆಘಾತಕಾರಿ ಮತ್ತು ದುರದೃಷ್ಟಕರವೆಂದು ಟೊರೊಂಟೋದ ಭಾರತದ ಕಾನ್ಸುಲೇಟ್ ಅಧಿಕಾರಿ ಸಂತಾಪ ಸೂಚಿಸಿದ್ದಾರೆ. ಕಾರ್ತಿಕ್ ಮೃತದೇಹವನ್ನು ಕುಟುಂಬಸ್ಥರಿಗೆ ತಲುಪಿಸಲು ಸಹಾಯದ ಭರವಸೆ ನೀಡಿದ್ದಾರೆ.
ವಿದ್ಯಾರ್ಥಿ ತಂದೆ ಜಿತೇಶ್ ವಾಸುದೇವ ಭಾರತದಲ್ಲಿದ್ದಾರೆ. ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಿ ಕಾರ್ತಿಕ್ ಜನವರಿ 5 ರಂದು ಕೆನಡಾಕ್ಕೆ ತೆರಳಿದ್ದು, ವಿದ್ಯಾಭಾಸ್ಯ ಮಾಡುತ್ತಲೇ ಅರೆಕಾಲಿಕ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗುತ್ತಿದ್ದಾಗ ಗುಂಡು ಹಾರಿಸಲಾಗಿದೆ. ನನ್ನ ಮಗ ವಿನಮ್ರನಾಗಿದ್ದು, ಆತನನ್ನು ಏಕೆ ಗುರಿಮಾಡಲಾಯಿತು ಎಂದು ತಿಳಿದುಕೊಳ್ಳಲು ಬಯಸುತ್ತೇವೆ; ತಿಳಿದುಕೊಳ್ಳುವುದು ನಮ್ಮ ಹಕ್ಕು. ನಾವು ನಮ್ಮ ಮಗನನ್ನು ಕಳೆದುಕೊಂಡಿದ್ದೇವೆ, ನಮ್ಮ ಹೃದಯ ನುಚ್ಚು ನೂರಾಗಿದೆ” ಎಂದು ಕಣ್ಣೀರಿಟ್ಟಿದ್ದಾರೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಕಾರ್ತಿಕ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ದುಃಖಿತನಾಗಿದ್ದೇನೆ ಎಂದು ಟ್ವೀಟ್ ಮಾಡಿರುವ ಅವರು ಅವರು, ಕಾರ್ತಿಕ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ