ಕೋಲಾರ: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
advertisement
9535127775 / 9901837775 / 6364528715 / 08362775155 / https://icsmpucollege.com/
ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ಮುಳಬಾಗಿಲು ನಗರದ ಜಹಾಂಗೀರ್ ಮೊಹಲ್ಲಾ ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಲ್ಲುತೂರಾಟವನ್ನು ಖಂಡಿಸಿ ಜನರು ಬೈಕಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವುದಕ್ಕೆ ಲಘು ಲಾಠಿಪ್ರಹಾರ ನಡೆಸಿದರು. ಸದ್ಯ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ