ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನಗಳು ಮಳೆಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ.11ರವರೆಗೂ ಮಳೆ ಬೀಳುವ ಸಂಭವವಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆ ಬೀಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ಕೇರಳ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಅದು ಹೇಳಿದೆ.
ತಮಿಳುನಾಡಿನ ಕರಾವಳಿಯಲ್ಲಿ ಮೇಲೆ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದಿನಿಂದ ರಾಜ್ಯದ ಕರಾವಳಿ ಮಾತ್ರವಲ್ಲದೆ ಬೆಂಗಳೂರು, ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ