ಗುಜರಾತಿನಲ್ಲಿ ಹೆಚ್ಚು ಹರಡು ಕೊರೊನಾ ವೈರಸ್‌ನ ‘XE’ ತಳಿ ಪತ್ತೆ: ವರದಿ

ನವದೆಹಲಿ: ಸದ್ಯ ವಿದೇಶಗಳಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ಸಿ ಒಮಿಕ್ರಾನ್‌ ರೂಪಾಂತರಿಯ ಹೈಬ್ರಿಡ್‌ ವೈರಸ್‌ ಎಕ್ಸ್ ಇ ಸೋಂಕು ಗುಜರಾತ್‍ನಲ್ಲಿ ವ್ಯಕ್ತಿಯೊಬ್ಬನಿಗೆ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಮೂರು ದಿನಗಳ ಹಿಂದೆಯಷ್ಟೇ ಮುಂಬೈನಲ್ಲಿ ಇದೇ ಮಾದರಿಯ ಸೋಂಕು ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ಆದರೆ ದೃಢಪಟ್ಟಿರಲಿಲ್ಲ. ಈಗ ಗುಜರಾತ್‍ನಲ್ಲಿ ಕಾಣಿಸಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಹೊಸ ಮಾದರಿಯ ಎಕ್ಸ್ ಇ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ವೇಗವಾಗಿ ಹರಡುತ್ತದೆ ಎಂದು ಎಚ್ಚರಿಸಿದೆ.

ಗುಜರಾತಿನ ವ್ಯಕ್ತಿಯೊಬ್ಬರಿಗೆ ಕಳೆದ ವಾರ ಸೋಂಕು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅದು ದೃಢಪಟ್ಟಿದ್ದು, ಅಲ್ಲಿನ ಸರ್ಕಾರ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ನಾವು ಕೆಲವು ಸ್ಯಾಂಪಲ್‍ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದೆವು. ಇದರಲ್ಲಿ ಹೊಸ ಮಾದರಿಯ ಸೋಂಕು ಇರುವುದು ದೃಢಪಟ್ಟಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆದರೂ ನಿಯಮಗಳ ಪ್ರಕಾರ ನಾವು ಇದನ್ನು ಖಚಿತಪಡಿಸುವಂತಿಲ್ಲ. ಕೇಂದ್ರ ಸರ್ಕಾರಕ್ಕೆ ಇದನ್ನು ಕಳುಹಿಸಿಕೊಟ್ಟಿದ್ದೇವೆ. ನಂತರವೇ ಇದು ದೃಢಪಡಲಿದೆ ಎಂದಿದ್ದಾರೆ.
ಭಾರತದಲ್ಲಿ ಕೆಲವು ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಒಮಿಕ್ರಾನ್ ಸೋಂಕಿಗಿಂತಲೂ ಇದು ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ಈ ಸೋಂಕು ಮಾನವನ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುವುದಿಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು. ನಿರ್ಲಕ್ಷ್ಯ ವಹಿಸುವುದು ಬೇಡ ಎಂದು ಅದು ಸಲಹೆ ನೀಡಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ರಾಜ್ಯಗಳಿಗೆ ಕೇಂದ್ರ ಸರ್ಕಾರದ ಪತ್ರ:
ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಆಗುತ್ತಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಕಳೆದ ವಾರ ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ದೆಹಲಿ, ಹರಿಯಾಣ, ಕೇರಳ, ಮಹಾರಾಷ್ಟ್ರ ಮತ್ತು ಮಿಜೋರಾಂ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳ ಜೊತೆಗೆ ಭೂಷಣ್ ಸಭೆ ನಡೆಸಲಿದ್ದಾರೆ.
ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ನಡುವೆಯೇ ಇಂದು ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಕೋವಿಡ್ ಹೆಚ್ಚಳವಾಗುತ್ತಿರುವ ಬಗ್ಗೆ ಎಚ್ಚರಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಪುನರಾರಂಭಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಂಡಿತ್ತು. ಈ ನಿಟ್ಟಿನಲ್ಲಿ ಕೋವಿಡ್ 19 ಸೋಂಕು ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಭೂಷಣ್ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement