ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, 6 ಮಂದಿ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಕಿಕ ದೌರ್ಜನ್ಯವೆಸಗಿದ ಆರು ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಇಬ್ಬರು ಬಾಲಕರನ್ನೂ ಸಹ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮಾಡಿ ತನಿಖೆ ಮುಂದುವರೆಸಿದ್ದಾರೆ. ಸುಮಾರು 15 ವರ್ಷದ ಅಪ್ರಾಪ್ತ ಬಾಲಕಿ 25 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. ಆ ಯುವಕ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಆ ದೃಶ್ಯವನ್ನು ಮತ್ತೊಬ್ಬ ಯುವಕ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾನೆ. ನಂತರ ಆತ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಬಾಲಕಿಗೆ ಈ ವಿಡಿಯೋ ದೃಶ್ಯಾವಳಿ ತೋರಿಸಿ ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ನೆಪದಲ್ಲಿ ಆಕೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಬಾಲಕಿ ಮನೆಗೆ ಬಂದಾಗ ಅಳುತ್ತಿರುವುದನ್ನು ಪೋಷಕರು ಗಮನಿಸಿ ಸಮಾಧಾನದಿಂದ ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ. ತಕ್ಷಣ ಬಾಲಕಿ ತಾಯಿ ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಬಾಲಕಿಯಿಂದ ಮಾಹಿತಿಪಡೆದು ಆರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement