ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಭಾಪತಿ ಹೊರಟ್ಟಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ರಾಷ್ಟ್ರೀಯ ಹೆದ್ದಾರಿಯ ಕುಲಕುಂಟೆ ಗ್ರಾಮದ ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಬಡಿದು ತೀವ್ರವಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲು ನೆರವಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಇಂದು, ಶನಿವಾರ ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಏಪ್ರಿಲ್‌ ೧೧ ರಿಂದ ೧೩ ರ ವರೆಗೆ ಆಸ್ಸಾಮಿನ ಗುವಾಹತಿಯಲ್ಲಿ ನಡೆಯಲಿರುವ ೮ನೇ ಕಾಮನ್‍ ವೆಲ್ತ್ ಸಂಸದೀಯ ಸಂಘದ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ಭರಮಸಾಗರ ಬಳಿಯ ಕುಲಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿತ್ತು. ಹಲವರು ಗಾಯಗೊಂಡಿದ್ದರು. ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.

ಉತ್ತರ ಕನ್ನಡ ಜಿಲ್ಲೆ ಶ್ರೀಕ್ಷೇತ್ರ ಇಡಗುಂಜಿ ದೇವಸ್ಥಾನದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವರದರಾಜ, ಮಂಜುನಾಥ, ನಾಗೇಂದ್ರ ರಾವ್ ಮತ್ತು ಮೋಹನ್ ಕುಮಾರ ತೀವ್ರವಾಗಿ ಗಾಯಾಗೊಂಡಿದ್ದಾರೆ.
ಸಭಾಪತಿ ಹೊರಟ್ಟಿಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮತ್ತು ಆಸ್ಪತ್ರೆಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಅಂಬುಲನ್ಸ್ ಕರೆಯಿಸಿ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು.ಸುಮಾರು ೪೫ ನಿಮಿಷಗಳಿಗೂ ಹೆಚ್ಚು ಕಾಲ ಅಪಘಾತದ ಸ್ಥಳದಲ್ಲಿಯೇ ಇದ್ದ ಗಾಯಾಳುಗಳಿಗೆ ಧೈರ್ಯ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement