ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಏಪ್ರಿಲ್ 30ರ ಒಳಗೆ ಆನ್​ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು 30.04.2022 (ತಾತ್ಕಾಲಿಕ) ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.kpsc.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 08.04.2022 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.04.2022 ಆಗಿದೆ.
ಹುದ್ದೆಗಳ ವಿವರ: ಒಟ್ಟು 5050 ಹುದ್ದೆಗಳು
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 1500
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3550
ಅರ್ಜಿ ಶುಲ್ಕಗಳ ವಿವರ: ಸಾಮಾನ್ಯ ಅಥವಾ ಇತರೆ ವರ್ಗಗಳಿಗೆ 400 ರೂ. ಗಳು ಹಾಗೂ ಎಸ್ ಸಿ/ಎಸ್ ಟಿ,ಪ್ರವರ್ಗ-1 ಅಭ್ಯರ್ಥಿಗಳಿಗೆ 200 ರೂ.ಗಳಾಗಿವೆ.
ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement