ಚಂದ್ರು ಹತ್ಯೆ ಪ್ರಕರಣ ಸಿಐಡಿಗೆ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು; ಭಾರೀ ಚರ್ಚೆಗೆ ಕಾರಣವಾಗಿರುವ ಬೆಂಗಳೂರು ನಗರದ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಸಿಐಡಿ ತನಿಖೆ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದ, ಹಳೆಗುಡ್ಡದ ಹಳ್ಳಿ ಪ್ರದೇಶದಲ್ಲಿ ನಡೆದ, ಚಂದ್ರಶೇಖರ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು, ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ ಎಂದು ಹೇಳಿದ್ದಾರೆ.

ಈ ಕುರುತು ಮಾಧ್ಯಮಗಳಿಗೆ ತಿಳಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಯುವಕನ ಹತ್ಯೆಗೆ ಸಂಬಂಧಿಸಿದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ, ಸತ್ಯವನ್ನು ಬಯಲಿಗೆ ಎಳೆಯಬೇಕು, ಹಾಗೂ ಹಂತಕರನ್ನು ಶಿಕ್ಷೆಗೆ, ಒಳಪಡಿಸಬೇಕು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆಗೆ ನಡೆಸಲು ಸೂಚಿಸಲಾಗಿದೆ ಎಂದರು.

ಚಂದ್ರು ಅವರನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ನಮ್ಮ ಪೊಲೀಸ್ ವಿಭಾಗದ ಮೇಲೆ ನಂಬಿಕೆ ಅಪನಂಬಿಕೆ ವಿಚಾರ ಇಲ್ಲಿ ಬರುವುದಿಲ್ಲ. ಸಿಐಡಿಯೂ ನಮ್ಮದೇ ಪೊಲೀಸರ ಇನ್ನೊಂದು ವಿಭಾಗವಾಗಿದೆ ಎಂದರು.
ಬೆಂಗಳೂರು ನಗರದ ಜೆ. ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್‌ 5ರಂದು ಚಂದ್ರಶೇಖರ್ (22) ಉರುಫ್‌ ಚಂದ್ರು ಹತ್ಯೆ ನಡೆದಿತ್ತು. ಉರ್ದು ಮಾತನಾಡಲು ಬಂದಿಲ್ಲ ಎಂಬ ಕಾರಣಕ್ಕೆ ಚಂದ್ರು ಹತ್ಯೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರದಲ್ಲಿ ಅವರು ತಮ್ಮ ಹೇಳಿಕೆ ಹಿಂಪಡೆದಿದ್ದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಬೈಕುಗಳು ಡಿಕ್ಕಿಯಾದ ವಿಚಾರಕ್ಕೆ ಜಗಳ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದರು. ನಂತರ ಗೃಹ ಸಚಿವರ ಹೇಳಿಕೆ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement