ಮರಕ್ಕೆ ಸ್ವಾಮೀಜಿ ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು, ಶ್ರೀಗಳಿಗೆ ಗಾಯ

ಗದಗ: ಜಿಲ್ಲೆಯ ನರಗುಂದ ಹೊರವಲಯದಲ್ಲಿ ಮರಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟಿದ್ದು, ಕಾರಿನಲ್ಲಿದ್ದ ಸ್ವಾಮೀಜಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಅಪಘಾತದಲ್ಲಿ ನರೇಗಲ್ ಹಿರೇಮಠ ಹಾಗೂ ಸವದತ್ತಿ ಮೂಡಿ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ನರಗುಂದ ಹೊರವಲಯದಲ್ಲಿ ಮರಕ್ಕೆ ಕಾರು ಢಿಕ್ಕಿ ಹೊಡೆದಿದೆ. ಚಾಲಕ ವೀರೇಶ ಕುರುಡಗಿ (38)ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಗಾಯಗೊಂಡಿದ್ದು ಅವರಿಗೆ ನರಗುಂದ ತಾಲೂಕು ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ನರಗುಂದ ಆಸ್ಪತ್ರೆಗೆ ಸವದತ್ತಿ ಶಾಸಕ ಆನಂದ ಮಾಮನಿ ಆಗಮಿಸಿ, ಶ್ರೀಗಳ ಆರೋಗ್ಯ ವಿಚಾರಿಸಿದರು.

ಶ್ರೀಗಳು ಸವದತ್ತಿ ತಾಲೂಕಿನ ಹುಲಿ ಗ್ರಾಮದ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement