ಟಿಎಂಸಿ ನಾಯಕನ ಮಗನ ಜನ್ಮದಿನದ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾಚಾರದ ನಂತರ 9ನೇ ತರಗತಿ ಬಾಲಕಿ ಸಾವು; ಬಲವಂತವಾಗಿ ದಹನ

ನಾಡಿಯಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಂಸಖಾಲಿ ಎಂಬಲ್ಲಿ ಇತ್ತೀಚೆಗೆ ಜನ್ಮದಿನದ ಸಮಾರಂಭವೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಸಂತ್ರಸ್ತೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಸದಸ್ಯನ ಮಗ ಎಂದು ಬಾಲಕಿಯ ಕುಟುಂಬ ಆರೋಪಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ನಡೆದ ನಾಲ್ಕು ದಿನಗಳ ಬಳಿಕ ಬಾಲಕಿಯ ಪೋಷಕರು ಶನಿವಾರ ಹಂಸಖಾಲಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ.

೯ನೇ ತರಗತಿ ಓದುತ್ತಿದ್ದ ಬಾಲಕಿ ಇತ್ತೀಚೆಗೆ ಆರೋಪಿಯ ಜನ್ಮದಿನದ ಸಮಾರಂಭದಲ್ಲಿ ಭಾಗವಹಿಸಲು ಆತನ ಮನೆಗೆ ಹೋಗಿದ್ದಳು. ಆದರೆ ಅವಳು ಅಸ್ವಸ್ಥಳಾಗಿ ಮನೆಗೆ ಮರಳಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಮೃತಪಟ್ಟಿದ್ದಾಳೆ ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸ್ಥಳೀಯ ಟಿಎಂಸಿ ನಾಯಕನ ಮಗನ ನಿವಾಸದಲ್ಲಿ ನಡೆದ ಪಾರ್ಟಿಯಲ್ಲಿ ಭಾಗಿಯಾಗಿ ಹಿಂದಿರುಗಿದ ನಮ್ಮ ಮಗಳಿಗೆ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಅತಿಯಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎಂದು ಪೋಷಕರು ಆರೋಪಿಸಿದ್ದಾರೆ.

ಆರೋಪಿ ಮತ್ತು ಅವನ ಸ್ನೇಹಿತರು ನಮ್ಮ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂಬುದು ನಂತರ ನಮಗೆ ಗೊತ್ತಾಗಿದೆ ಎಂದು ಬಾಲಕಿ ತಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆಕೆಯ ಮರಣೋತ್ತರ ಪರೀಕ್ಷೆ ವರದಿ ಸಿಗುವ ಮೊದಲೇ ಜನರ ಗುಂಪೊಂದು ಮಗಳ ಶವವನ್ನು ಅಂತಿಮಸಂಸ್ಕಾರಕ್ಕೆ ಬಲವಂತವಾಗಿ ಕೊಂಡೊಯ್ದಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಓದಿರಿ :-   ನನ್ನನ್ನು ಸಚಿವ ಸ್ಥಾನದಿಂದ ಮುಕ್ತಗೊಳಿಸಿ: ರಾಜಸ್ಥಾನ ಸಚಿವರ ಟ್ವೀಟ್‌, ಕಾಂಗ್ರೆಸ್ ಸಂಕಷ್ಟಕ್ಕೆ ಮುನ್ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ