ರೋಪ್‌ವೇ ಅಪಘಾತದ ರಕ್ಷಣಾ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್‌ನಿಂದ ಬಿದ್ದು ವ್ಯಕ್ತಿ ಸಾವು : ಭಯಾನಕ ದೃಶ್ಯ ಸೆರೆ

ನವದೆಹಲಿ: ರಕ್ಷಣಾ ಕಾರ್ಯಾಚರಣೆ ವೇಳೆ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ನಿಂದ ವ್ಯಕ್ತಿಯೊಬ್ಬರು ಬಿದ್ದು ಸಾವಿಗೀಡಾದ ಘಟನೆ ಜಾರ್ಖಂಡ್‌ನ ದಿಯೋಘರ್‌ನಲ್ಲಿ ಸೋಮವಾರ ನಡೆದಿದೆ. ಅವರು Mi-17 V5 ಹೆಲಿಕಾಪ್ಟರ್‌ನಿಂದ ರಕ್ಷಣೆ ಮಾಡುವ ಸಮಯದಲ್ಲಿ ಜಾರಿ ಕೆಳಗಿನ ಒರಟಾದ ಬಂಡೆಯ ಮೇಲೆ ಮೇಲೆ ಬಿದ್ದು ಮೃತಪಟ್ಟಿದ್ದಾನೆ, ಇದು ದುರಂತದಲ್ಲಿ ಮೂರನೇ ಸಾವಾಗಿದೆ.

ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಾಲಯದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿ ರೋಪ್‌ ವೇಯಲ್ಲಿ ಕೆಲವು ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಾಗ ಸುಮಾರು 50 ಜನರು ಭಾನುವಾರ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಐಎಎಫ್ ಜೊತೆಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಕೇಬಲ್ ಕಾರುಗಳ ಘರ್ಷಣೆಯ ಪರಿಣಾಮವಾಗಿ ತಾಂತ್ರಿಕ ಅಡಚಣೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಆದಾಗ್ಯೂ, ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಘಟನೆಯ ನಂತರ ಕೇಬಲ್ ಕಾರಿನಿಂದ ಜಿಗಿಯಲು ಪ್ರಯತ್ನಿಸಿದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಕೂಡ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ದಿಯೋಘರ್ ಉಪ ಆಯುಕ್ತ ಮಂಜುನಾಥ ಭಜಂತ್ರಿ ತಿಳಿಸಿದ್ದಾರೆ.
ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಇನ್ನೂ ಕೆಲವರು ರೋಪ್‌ ವೇದಲ್ಲಿ ಕೇಬಲ್ ಕಾರ್‌ಗಳಲ್ಲಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲಾಗುತ್ತಿದೆ. ಎಲ್ಲಾ ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement