ಧಾರವಾಡ: ಹಿಂದೂಯೇತರನ ಅಂಗಡಿ ಧ್ವಂಸ ಪ್ರಕರಣ- ನಾಲ್ವರ ಬಂಧನ

ಧಾರವಾಡ: ಹಿಂದೂಯೇತರ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಅವರನ್ನು ಬಂಧಿಸಲಾಗಿದೆ. ಅವರು ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರಅಪಾರ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಬಳಿ 4 ಹಿಂದೂಯೇತರ ಅಂಗಡಿಗಳಿದ್ದು, 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದ್ದರು. ಶನಿವಾರ ಹಿಂದೂಯೇತರ ಅಂಗಡಿಗಳನ್ನು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement