ಮೇ 2ನೇ ವಾರದಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ : ಸಚಿವ ನಾಗೇಶ

ವಿಜಯಪುರ: ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿವೆ. ಮಂಗಳವಾರದಿಂದ  ಕೀ ಉತ್ತರಗಳು, ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ( SSLC Exam Results ) ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ ಹೇಳಿದ್ದಾರೆ.

ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಇಂದು, ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಮಾರ್ಚ್‌ 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿಸಿದರು.

ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚಿದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ತಿಳಿಸಿದರು.

ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವರು ಮಾಹಿತಿ ನೀಡಿದರು.
ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಇಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ’ ಎಂದು ಅವರು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement