ವಿದ್ಯಾರ್ಥಿನಿ ಮುಸ್ಕಾನಳನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಸಿಎಂಗೆ ಸಂಸದ ಅನಂತಕುಮಾರ ಹೆಗಡೆ ಪತ್ರ

ಕಾರವಾರ: ಅಲ್ಲಾ ಹೋ ಅಕ್ಬರ್ ಎಂದು ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‍ ಅವಳನ್ನು ತನಿಖೆಗೆ ಒಳಪಡಿಸಬೇಕು ಎಂದು  ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
ಈ ಘಟನೆ ಹಿಂದೆ ಕಾಣದ ಕೈಗಳು ಮತ್ತು ನಿಷೇಧಿತ ಮುಸ್ಲಿಂ ಸಂಘಟನೆಗಳ ಸಂಬಂಧದ ಬಗ್ಗೆ ತನಿಖೆ ಮಾಡುವಂತೆ ಆಗ್ರಹಿಸಿ ಅನಂತಕುಮಾರ ಹೆಗಡೆ ಪತ್ರ ಮುಖ್ಯಮಂತ್ರಿಗಳಿಗೆ ಬರೆದಿದ್ದಾರೆ.

ಈ ಹಿಂದೆ ಹಿಜಾಬ್ ವಿವಾದ ತಾರಕ್ಕೇರಿದ್ದ ಸಂದರ್ಭದಲ್ಲಿ ಮಂಡ್ಯದ ಪಿ.ಇ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ ಇದಕ್ಕುತ್ತರವಾಗಿ ಬುರ್ಖಾಧಾರಿ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಎಂಬ ಯು ಅಲ್ಲಾ ಹೂ ಅಕ್ಬರ್‌ ಎಂದು ಘೋಷಣೆ ಕೂಗಿದ್ದ ವೀಡಿಯೊ ಜಗತ್ತಿನೆಲ್ಲಡೆ ಪ್ರಮುಖ ನ್ಯೂಸ್ ಚಾನಲ್‍ಗಳಲ್ಲಿ ಪ್ರಸಾರವಾಗಿ, ವಿದ್ಯಾರ್ಥಿನಿಯು ದಿಢೀರ್ ಪ್ರಸಿದ್ಧಿಯನ್ನು ಪಡೆದಿದ್ದ ಘಟನೆ ನಡೆದಿತ್ತು.
ಈ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಸಂಘಟನೆಗಳಿಂದ ಪ್ರಶಂಸೆಯ ನುಡಿಗಳು ಹಾಗೂ ಬಹುಮಾನಗಳ ಘೋಷಣೆ ಮಾಡಲಾಗಿತ್ತು.

ಹೀಗಿರುವಾಗ ನಿಷೇಧಿತ ಮುಸ್ಲಿಂ ಭಯೋತ್ಪಾದಕ ಸಂಘಟನೆಯಾದ ಆಲ್‌-ಖೈದಾದ ಮುಖ್ಯಸ್ಥನಾದ ಆಯಮನ್-ಅಲ್‌ ಜವಾಹಿರಿ ಇತ್ತೀಚೆಗೆ ಈ ವಿದ್ಯಾರ್ಥಿನಿಯ ಕುರಿತು ಭಾರತದ ಸರ್ವಶ್ರೇಷ್ಠ ಮಹಿಳೆ ಎಂದು ಹೊಗಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿದೆ.
ಕರ್ನಾಟಕ ಹೈಕೋರ್ಟ್‌ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರೂ ಸಹಿತ ಹಲವಾರು ರಾಜಕಾರಣಿಗಳು, ಮೂಲಭೂತವಾದಿ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹಿಜಾಬ್ ಪ್ರತಿಭಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಉಚ್ಚ ನ್ಯಾಯಲಯದ ಪೀಠವು ಅಭಿಪ್ರಾಯ ವ್ಯಕ್ತಪಡಿಸಿರುವುದು ಇಲ್ಲಿ ಉಲ್ಲೇಖನೀಯವಾಗಿದೆ. ಕಾರಣ ಬೀಬಿ ಮುಸ್ಕಾನ್ ವಿದ್ಯಾರ್ಥಿನಿಗೆ ಹಿಜಾಬ್ ಷಡ್ಯಂತ್ರದ ಹಿಂದಿರುವ ಕಾಣದ ಕೈಗಳು ಮತ್ತು ನಿಷೇಧಿತ ಸಂಘಟನೆಗಳೊಂದಿಗೆ ಇರುವ ಸಂಬಂಧದ ಕುರಿತಂತೆ ಕೂಲಂಕುಷವಾದ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement