ಇದು ಭರವಸೆ-ಕನಸುಗಳ ಚಿತ್ರ :ಗಂಗಾನದಿ ದಡಕ್ಕೆ ಎಷ್ಟೊಂದು ಓದುಗರ ದಂಡು…ಪರೀಕ್ಷೆಗಾಗಿ ನಡೆಯುತ್ತಿದೆ ಈ ಪರಿಶ್ರಮ..!

ಸರ್ಕಾರಿ ಉದ್ಯೋಗ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, ಪಾಟ್ನಾದ ಗಂಗಾ ನದಿಯ ದಡದಲ್ಲಿ ನೂರಾರು ವಿದ್ಯಾರ್ಥಿಗಳು ಕುಳಿತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿರುವ ಚಿತ್ರಗಳನ್ನು ಪ್ರಸಿದ್ಧ ಉದ್ಯಮಿ ಹರ್ಷ ಗೋಯೆಂಕಾ ಹಂಚಿಕೊಂಡಿದ್ದಾರೆ. ಉದ್ಯಮಿ ಹರ್ಷ ಅವರು ಸಾಮಾಜಿಕ ಮಾಧ್ಯಮದಲ್ಲಿ ಸ್ಫೂರ್ತಿದಾಯಕ ವಿಷಯಗಳನ್ನು ಹಂಚಿಕೊಳ್ಳಲು ಹೆಸರಾಗಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ಗಂಗಾ ನದಿಯ ದಡದಲ್ಲಿ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಇದು ಭರವಸೆ ಮತ್ತು ಕನಸುಗಳ ಚಿತ್ರ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.
ವಾರಾಂತ್ಯದಲ್ಲಿ ಮಾತ್ರ ಇಷ್ಟೊಂದು ವಿದ್ಯಾರ್ಥಿಗಳು

ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರಿ ನೇಮಕಾತಿ ಸಂಸ್ಥೆಗಳಾದ ಎಸ್‌ಎಸ್‌ಸಿ, ಯುಪಿಎಸ್‌ಸಿ, ರಾಜ್ಯ ನೇಮಕಾತಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳು ಹಾಗೂ ಇತರೇ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ ಎಂದು ಹೇಳಲಾಗಿದೆ. ಪ್ರತಿ ವಾರಾಂತ್ಯದಲ್ಲಿ ನದಿಯ ದಡದಲ್ಲಿ ಒಟ್ಟಿಗೆ ಕುಳಿತು ಅಧ್ಯಯನ ಮಾಡಲು ಇವರು ನಿರ್ಧರಿಸಿದ್ದು, ಬೇರೆ ದಿನಗಳಲ್ಲಿ ಇಷ್ಟೊಂದು ಮಂದಿ ಸ್ಪರ್ಧಾರ್ಥಿಗಳು ಈ ಸ್ಥಳದಲ್ಲಿ ಕಂಡುಬರುವುದಿಲ್ಲವಂತೆ. ವಾರಾಂತ್ಯದಲ್ಲಿ ಅವರು ತಾವು ಓದಿದ್ದರ ಬಗ್ಗೆ ಪರಸ್ಪರ ಚರ್ಚೆ ನಡೆಸುತ್ತಾರಂತೆ ಹಾಗೂ ತಮಗಿರುವ ಸಂದೇಹಗಳನ್ನು ಪರಸ್ಪರರ ಮೂಲಕ ಪರಿಹರಿಸಿಕೊಳ್ಳುತ್ತಾರಂತೆ.

ಬಿಹಾರದಲ್ಲಿ ಬಹುಪಾಲು ಮಂದಿ ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಎಂಬುವವರು ಟ್ವೀಟ್ ಮಾಡಿ ‘ಪಾಟ್ನಾದ ಅನೇಕ ಸಾರ್ವಜನಿಕ ಉದ್ಯಾನವನಗಳಲ್ಲಿಯೂ ಇಂತಹದ್ದೇ ದೃಶ್ಯಗಳು ಕಂಡುಬರುತ್ತವೆ ಎಂದು ಹೇಳಿದ್ದಾರೆ. ಮತ್ತೊಬ್ಬ ವ್ಯಕ್ತಿ ಪ್ರತಿಕ್ರಿಯೆ ನೀಡಿ, ಒಬ್ಬ ವ್ಯಕ್ತಿಗೆ ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸರ್ಕಾರಿ ಕೆಲಸ ಮಾತ್ರ ಸಾಕಾಗುವುದಿಲ್ಲ. ಮುಂದುವರೆದ ತಂತ್ರಜ್ಞಾನಕ್ಕೂ ಅಪ್ಡೇಟ್ ಆಗಬೇಕೆಂದು ಸಲಹೆ ನೀಡಿದ್ದಾರೆ.
ಅವರ ಪ್ರಯತ್ನಗಳು ಶ್ಲಾಘನೀಯ. ಆದರೆ ಬಿಹಾರದಲ್ಲಿ ಕೈಗಾರುಕೆಗಳು ಬೆಳೆದು ಸುಸ್ಥಾಪಿತ ಕೈಗಾರಿಕಾ ನಕ್ಷೆಯಲ್ಲಿ ಬಿಹಾರ ಬರಬೇಕಾಗಿದೆ ಎಂಬುದನ್ನು ಇದು ಸೂಚಿಸುತ್ತದೆ. ಒಬ್ಬ ವ್ಯಕ್ತಿಗೆ ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸರ್ಕಾರಿ ಕೆಲಸ ಮಾತ್ರ ಸಾಕಾಗುವುದಿಲ್ಲ ಮತ್ತು ಇಂದಿನ ಮುಂದುವರಿದ ತಂತ್ರಜ್ಞಾನ + ಹೂಡಿಕೆ ಯುಗದಲ್ಲಿ, ಕಾರ್ಪೊರೇಟ್ ಉದ್ಯೋಗಕ್ಕೂ ಆದ್ಯತೆಯ ಅಗತ್ಯವಿದೆ ಎಂದು ಮತ್ತೊಬ್ಬರು ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಆಘಾತಕಾರಿ...| ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿ ಇರಿಸಿಕೊಂಡ ಬ್ಯಾಂಕ್‌ ; ಹಣದ ಕಂತು ಕೊಟ್ಟ ಬಳಿಕವೇ ಮಹಿಳೆಯ ಬಿಡುಗಡೆ...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement