ನ್ಯೂಯಾರ್ಕ್: ಸುರಂಗ ನಿಲ್ದಾಣದಲ್ಲಿ ಶೂಟೌಟ್, 16 ಜನರಿಗೆ ಗಾಯ

ನ್ಯೂಯಾರ್ಕ್: ಸುರಂಗ ನಿಲ್ದಾಣದಲ್ಲಿ ಶೂಟೌಟ್, 10 ಮಂದಿಗೆ ಗುಂಡೇಟು, ಅನೇಕರಿಗೆ ಗಾಯ
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ನಲ್ಲಿ ಕನಿಷ್ಠ 10 ಮಂದಿಗೆ ಗುಂಡೇಟು ತಗುಲಿದ್ದು, 16 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸನ್‌ಸೆಟ್ ಪಾರ್ಕ್‌ನ 36 ನೇ ಸ್ಟ್ರೀಟ್ ನ ಸುರಂಗ ನಿಲ್ದಾಣದಲ್ಲಿ ಪ್ರಾಥಮಿಕ ವರದಿಗಳಂತೆ ಶೂಟೌಟ್ ನಲ್ಲಿ ಕನಿಷ್ಠ 10 ಮಂದಿಗೆ ಗುಂಡೇಟು ತಗುಲಿದೆ ಎಂದು ನ್ಯೂಯಾರ್ಕ್ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ.

ಮಂಗಳವಾರ ಬೆಳಿಗ್ಗೆ ನಿಲ್ದಾಣದಲ್ಲಿ ಅತೀ ಹೆಚ್ಚು ಪ್ರಯಾಣಿಕರಿದ್ದ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದ ವ್ಯಕ್ತಿ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾನೆ. ಈ ವೇಳೆ ಪ್ರಯಾಣಿಕರಿಗೆ ಗುಂಡೇಟು ತಗುಲಿದೆ ಎನ್ನಲಾಗಿದೆ. ಮತ್ತೊಂದು ಮೂಲದ ಪ್ರಕಾರ ಈ ಶೂಟೌಟ್ ನಲ್ಲಿ ಕನಿಷ್ಠ 16 ಮಂದಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ನ್ಯೂಯಾರ್ಕ್ ಪೊಲೀಸರು ನಿಲ್ದಾಣವನ್ನು ವಶಕ್ಕೆ ಪಡೆದಿದ್ದು, ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ತರುವ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ ಘಟನೆ ನಡೆದ ಸನ್‌ಸೆಟ್ ಪಾರ್ಕ್‌ನ 36 ನೇ ಸ್ಟ್ರೀಟ್ ನ ಸುರಂಗಮಾರ್ಗ ನಿಲ್ದಾಣದ ಲೈನ್ ನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಫ್ರಿಕಾದ ಕಾರ್ಮಿಕರನ್ನು ಚಾವಟಿಯಿಂದ ಮನಬಂದಂತೆ ಥಳಿಸಿದ ಚೀನಾ ಮ್ಯಾನೇಜರ್ ; ವ್ಯಾಪಕ ಟೀಕೆ

ಸ್ಫೋಟಗೊಳ್ಳದ ಸ್ಫೋಟಕ ಡಿವೈಸ್ ಗಳು ಪತ್ತೆ
ಕಾರ್ಯಾಚರಣೆ ವೇಳೆ ಸುರಂಗ ಮಾರ್ಗದಲ್ಲಿ ಸ್ಫೋಟಗೊಳ್ಳದ ಸ್ಫೋಟಕ ಡಿವೈಸ್ ಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಬರುವ ಇತರೆ ನಿಲ್ದಾಣಗಳನ್ನು ಮತ್ತು ಈ ಮಾರ್ಗದಲ್ಲಿ ಸೇರುವ ಪ್ರದೇಶಗಳಲ್ಲಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಘಟನೆ ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವೈಟ್ ಹೌಸ್ ಹಿರಿಯ ವಕ್ತಾರರು ಮಾಹಿತಿ ನೀಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement