ಸಂತೋಷ್ ಆತ್ಮಹತ್ಯೆ ಪ್ರಕರಣ: ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ, ವರದಿ ನಂತರ ಮುಂದಿನ ಕ್ರಮ-ಸಿಎಂ ಬೊಮ್ಮಾಯಿ

ಮಂಗಳೂರು: ಸಚಿವ ಈಶ್ವರಪ್ಪ ಅವರ ವಿರುದ್ಧ ಶೇ. 40 ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಕೂಲಂಕಷವಾಗಿ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ಎಸ್ಪಿ ಸಹಿತ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಕೈಗೊಂಡಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ತಜ್ಞರ ತಂಡವನ್ನು ಕಳುಹಿಸಲಾಗಿದೆ. ಅದರ ತನಿಖಾ ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಈ ಘಟನೆಯಿಂದಾಗಿ ಸಚಿವ ಈಶ್ವರಪ್ಪ ಮತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂಬ ಮಾಜಿ ಸಿದ್ದರಾಮಯ್ಯ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಅಂದು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದಾರೆಯೇ. ಎಂದು ಪ್ರಶ್ನಿಸಿದ ಅವರು, ಆದರೆ ಪ್ರತಿ ಜೀವಕ್ಕೂ ಮೌಲ್ಯ ಇದೆ. ವ್ಯಕ್ತಿಗೆ ಅವರದ್ದೇ ಜೀವನ ಇದೆ. ಅದನ್ನು ಗೌರವಿಸಬೇಕು. ನಾವು ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡುತ್ತಿದ್ದೇವೆ. ತನಿಖೆಯಿಂದ ಸತ್ಯಾಂಶ ಹೊರಗೆ ಬರಲಿದೆ ಎಂದು ತಿಳಿಸಿದರು. ಈಶ್ವರಪ್ಪ ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿದ್ದಾರೆ. ಎಲ್ಲದಕ್ಕೂ ತನಿಖಾ ವರದಿ ಬಂದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದರು.

ಪ್ರಮುಖ ಸುದ್ದಿ :-   ಬೆಂಗಳೂರಿನ ಸ್ಫೋಟ ಪ್ರಕರಣ ಭೇದಿಸಿದ ಪೊಲೀಸರು: ವೈಯಕ್ತಿಕ ದ್ವೇಷವೇ ಕೃತ್ಯಕ್ಕೆ ಕಾರಣ ; ಮೂವರ ಬಂಧನ

ಸಚಿವ ಕೆ. ಎಸ್‌. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ ಪಾಟೀಲ ಅವರು,ಈಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಅವರ ಮರಣ ಪತ್ರ ಸಾಕಷ್ಟು ಸದ್ದು ಮಾಡ್ತಿದೆ. ಸಾವಿಗೂ ಮುನ್ನ ತಮ್ಮ ಮರಣ ಸಂದೇಶವನ್ನು ಮೊಬೈಲ್ ಮೂಲಕ ಕಳುಹಿಸಿ ಉಡುಪಿಯ ಹೋಟೆಲ್‌ನ ರೂಮ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಸಚಿವರಾದ ಕೆ. ಎಸ್‌. ಈಶ್ವರಪ್ಪ ಅವರೇ ನೇರ ಕಾರಣ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ. ಎಸ್‌. ಯಡಿಯೂರಪ್ಪನವರು ಹಾಗೆಯೇ ಅವರಿವರೆನ್ನದೆ ಎಲ್ಲರೂ ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾವು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡು ಬಂದಿರುತ್ತೇನೆ ಅಷ್ಟೇ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೇ ಸಂಬಂಧ ಇರುವುದಿಲ್ಲ.’ ಎಂದು ಮರಣ ಸಂದೇಶದಲ್ಲಿ ಸಂತೋಷ್ ಪಾಟೀಲ್ ಬರೆದು ವಾಟ್ಸಪ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement