ರಾಮನಗರ: ಜೆಡಿಎಸ್‌ನ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಕಟಿಸಿದ್ದಾರೆ.
ಈ ಕುರಿತು ಮಂಗಳವಾರ ಮಾಹಿತಿ ನೀಡಿರುವ ದೇವೇಗೌಡ ಅವರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿಗೆ ಸೇರಿದವರಾಗಿರುವ ಹಾಲಿ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ