ಸಂತೋಷ್ ಪಾಟೀಲ ಸಾವಿನಲ್ಲಿ ಕಾಂಗ್ರೆಸ್ ‘ಬೇನಾಮಿ ಅಧ್ಯಕ್ಷೆ’ಯ ಕೈವಾಡವಿದೆಯೇ : ಬಿಜೆಪಿ ಟ್ವೀಟ್

ಬೆಂಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆಗೆ ಬಿಜೆಪಿ ಈಗ ಇದು ಕಾಂಗ್ರೆಸ್ ಪಕ್ಷದ “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಸೃಷ್ಟಿಸಿದ “ಮಹಾಕೈವಾಡವೇ ಎಂದು ಪ್ರಶ್ನಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿಯ ರಾಜ್ಯ ಘಟಕ, ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತೆರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮೆತ್ತಗಿನ ಮನುಷ್ಯನೇ? ಇದರ ಹಿಂದೆ #40PercentCONgressToolkit ಕೈವಾಡವಿದೆ. ಅರಾಜಕತೆ ಸೃಷ್ಟಿಸಲು ಮುಗ್ಧರನ್ನು ಕಾಂಗ್ರೆಸ್‌ ನಾಯಕರು ಬಳಸಿಕೊಳ್ಳುತ್ತಿದ್ದಾರೆಯೇ? ಎಂದು ಪ್ರಶ್ನಿಸಿದೆ.

ಅನುಮೋದನೆ ಇಲ್ಲದೆಯೇ ನೂರಕ್ಕೂ ಹೆಚ್ಚು ಕಾಮಗಾರಿ ನಡೆಸಿದ್ದ ಸಂತೋಷ ನಡೆಸಿದ್ದಾರೆ ಎಂಬುದಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ಇದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಯಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ಅನಧಿಕೃತ ಕಾಮಗಾರಿಯ ಹಿಂದೆ ಕೆಪಿಸಿಸಿಯ “ಅಘೋಷಿತ ಅಧ್ಯಕ್ಷೆಯ” ಪಾತ್ರವೇನು? ಎಂದು ಪ್ರಶ್ನಿಸಿದೆ.

ಸಂತೋಷ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ. ಈ ಹಿಂದೆ ಮೃತ ಸಂತೋಷ ಪಾಟೀಲ ರಾಹುಲ್ ಗಾಂಧಿ ಸಹಿ ನಕಲು ಮಾಡಿದ್ದು ನಿಜವೇ? ಈ ಕಾರಣಕ್ಕಾಗಿ ಆತನನ್ನು ಕಾಂಗ್ರೆಸ್ಸಿನಿಂದ ಉಚ್ಚಾಟನೆ ಮಾಡಿದ್ದು ಸುಳ್ಳೇ ? ಎಂದು ಕಾಂಗ್ರೆಸ್‌ ಅನ್ನು ಪ್ರಶ್ನಿಸಿರುವ ಬಿಜೆಪಿ, ಆತ ಕಾಂಗ್ರೆಸ್ಸಿನ “ಬೇನಾಮಿ ಅಧ್ಯಕ್ಷರಿಗೆ” ನಿಷ್ಠನಾಗಿದ್ದದ್ದು ಸುಳ್ಳೇ? ಇದು “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಪೋಣಿಸಿರುವ ಷಡ್ಯಂತ್ರವೇ? ಕಾರ್ಯಾದೇಶ ಇಲ್ಲದೇ ಕೆಪಿಸಿಸಿ “ಅಘೋಷಿತ ಅಧ್ಯಕ್ಷೆಯ” ಕ್ಷೇತ್ರದಲ್ಲಿ ಕಾಮಗಾರಿ ನಡೆಸಿದ್ದು ಹೇಗೆ ? ಹೀಗೆ ಸಂತೋಷ ಪ್ರಕರಣ #40PercentCONgressToolkit ಭಾಗ ಎಂಬುದಕ್ಕೆ ಹಲವಾರು ದೃಷ್ಟಾಂತಗಳಿವೆ ಎಂದು ಬಿಜೆಪಿ ಆರೋಪಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

40% ಕಮಿಷನ್ ಆರೋಪವು ಕಾಂಗ್ರೆಸ್ ಪಕ್ಷ ಸೃಷ್ಟಿಸಿದ ಬಹುದೊಡ್ಡ ಟೂಲ್ ಕಿಟ್. ಈ ಷಡ್ಯಂತ್ರವನ್ನು ಪೋಷಿಸುವುದಕ್ಕಾಗಿ ಕಾಂಗ್ರೆಸ್ ಖಳನಾಯಕರು ಮಗದೊಂದು ಪ್ರಹಸನ ಹೆಣೆದರೇ? ಸಾವಿನ ರಾಜಕಾರಣಕ್ಕೆ ಕಾಂಗ್ರೆಸ್ ಮುನ್ನುಡಿ ಬರೆಯುತ್ತಿದೆಯೇ? ಎಂದು ಬಿಜೆಪಿ ಆರೋಪಿಸಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement