ಹಿಜಾಬ್ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ: ಕರ್ನಾಟಕ ಎಫ್ಐಆರ್ ರದ್ದತಿ ಕೋರಿ ಸುಪ್ರೀಂಗೆ ಮೊರೆ

ನವದೆಹಲಿ: ಹಿಜಾಬ್ ಕುರಿತು ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಕರಣದ ಆರೋಪಿ ಚೆನ್ನೈ ನಿವಾಸಿ ರಹಮತುಲ್ಲಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ ತಮಿಳುನಾಡಿನಲ್ಲಿ ದಾಖಲಾಗಿರುವುದರಿಂದ ಕರ್ನಾಟಕದಲ್ಲಿ ತನ್ನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ ಅನ್ನು ತಮಿಳುನಾಡಿನ ಮಧುರೈ ಪೊಲೀಸ್ ಠಾಣೆಗೆ ವರ್ಗಾಯಿಸಬೇಕೆಂದು ಕೋರಿದ್ದಾನೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬಂದಾಗ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠ ತಮಿಳುನಾಡು ಮತ್ತು ಕರ್ನಾಟಕ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿತು.ವಕೀಲ ಎ. ಲಕ್ಷ್ಮೀನಾರಾಯಣನ್ ಮೂಲಕ ಅರ್ಜಿ ಸಲ್ಲಿಸಲಾಗಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆ (ಇಆರ್‌ಪಿ) ಅಲ್ಲ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್‌ ಆ ಮೂಲಕ ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ರಾಜ್ಯ ಸರ್ಕಾರ ನೀಡಿದ ಅಧಿಕಾರವನ್ನು ಎತ್ತಿಹಿಡಿದಿತ್ತು. ಈ ಸಂಬಂಧ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಲಾಗಿತ್ತು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement