ಏಪ್ರಿಲ್‌ 17ರಂದು ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಅಧಿಕಾರ ಸ್ವೀಕಾರ

ರಾಮನಗರ: ಜೆಡಿಎಸ್‌ನ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪ್ರಕಟಿಸಿದ್ದಾರೆ.
ಈ ಕುರಿತು ಮಂಗಳವಾರ ಮಾಹಿತಿ ನೀಡಿರುವ ದೇವೇಗೌಡ ಅವರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿಗೆ ಸೇರಿದವರಾಗಿರುವ ಹಾಲಿ ಅಧ್ಯಕ್ಷ ಎಚ್​.ಕೆ. ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸರಿಸಮನಾಗಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು. ಈ ಮೂಲಕ ಇಬ್ಬರೂ ಅನುಭವಿ ನಾಯಕರು ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement