ಐಎನ್ಎಸ್ ವಿಕ್ರಾಂತ್ ಹಣ ದುರುಪಯೋಗ ಪ್ರಕರಣ: ಬಾಂಬೆ ಹೈಕೋರ್ಟಿನಿಂದ ಬಿಜೆಪಿ ನಾಯಕ ಕಿರೀಟ್ ಸೋಮಯ್ಯಗೆ ಮಧ್ಯಂತರ ಪರಿಹಾರ

ಮುಂಬೈ: ಮುಂಬೈ ಪೊಲೀಸರು ದಾಖಲಿಸಿರುವ ಹಣ ದುರುಪಯೋಗದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಿರೀಟ್ ಸೋಮಯ್ಯ ಅವರಿಗೆ ನಿರೀಕ್ಷಣಾ ಜಾಮೀನು ನೀಡುವ ಮೂಲಕ ಮಧ್ಯಂತರ ಪರಿಹಾರ ನೀಡಿದೆ.
ಐಎನ್‌ಎಸ್ ವಿಕ್ರಾಂತ್ ವಿಮಾನವಾಹಕ ನೌಕೆ ಕಳಚದಂತೆ ರಕ್ಷಿಸಿ ಇಡಲು ಸಂಗ್ರಹಿಸಿದ್ದ ₹ 50 ಕೋಟಿಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಸೋಮಯ್ಯ ಅವರನ್ನು ಬಂಧಿಸಿದಲ್ಲಿ ₹ 50,000 ಜಾಮೀನು ಬಾಂಡ್ ಸಲ್ಲಿಸಿದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಮತ್ತು ಏಪ್ರಿಲ್ 18, 2022ರಿಂದ ನಾಲ್ಕು ದಿನಗಳ ಕಾಲ ಮುಂಬೈ ಪೊಲೀಸ್‌ ಆರ್ಥಿಕ ಅಪರಾಧ ವಿಭಾಗದ ಮುಂದೆ ಅವರು ಹಾಜರಾಗಬೇಕು ಎಂದು ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಆದೇಶಿಸಿದ್ದಾರೆ.

ಅರ್ಜಿಯ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ನ್ಯಾಯಾಲಯ, ಮುಂದಿನ ವಿಚಾರಣೆಯವರೆಗೂ ಸೋಮಯ್ಯ ಅವರಿಗೆ ಬಂಧನದಿಂದ ರಕ್ಷಣೆ ಮುಂದುವರೆಯುತ್ತದೆ ಎಂದು ಸೂಚಿಸಿತು. ಈ ಮಧ್ಯೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ. ಸೋಮಯ್ಯ ಪರ ಹಿರಿಯ ನ್ಯಾಯವಾದಿ ಅಶೋಕ್‌ ಮುಂಡರಗಿ ವಾದ ಮಂಡಿಸಿದರು. ಆರ್ಥಿಕ ಅಪರಾಧ ವಿಭಾಗವನ್ನು ವಕೀಲ ಶಿರೀಷ್‌ ಗುಪ್ತೆ ಪ್ರತಿನಿಧಿಸಿದ್ದರು.

ಪ್ರಮುಖ ಸುದ್ದಿ :-   ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement