ಟಿಪ್-ಆಫ್ ನಂತರ ಶಿಕ್ಷಕಿ ಬಳಿ ದೇಶ ನಿರ್ಮಿತ ಪಿಸ್ತೂಲ್ ಪತ್ತೆ…! ವೀಡಿಯೊ ವೈರಲ್‌

ಮೈನ್‌ಪುರಿ (ಉತ್ತರ ಪ್ರದೇಶ): ದೇಶ ನಿರ್ಮಿತ ಪಿಸ್ತೂಲ್ ಇಟ್ಟುಕೊಂಡು ತಿರುಗಾಡುತ್ತಿದ್ದ ಮಹಿಳೆಯೊಬ್ಬರನ್ನು ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಿನ್ನೆ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಆರೋಪಿಯನ್ನು ಕರಿಷ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದ್ದು, ಫಿರೋಜಾಬಾದ್‌ನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಕೆಲವು ಕೆಲಸದ ಕಾರಣ ಅವಳು ನಿನ್ನೆ ಮೈನ್ಪುರಿಯಲ್ಲಿದ್ದಳು” ಎಂದು ಅವರು ಹೇಳಿದ್ದಾರೆ.

ನಗರದ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬರು ಆಯುಧ ಹಿಡಿದುಕೊಂಡು ಹೋಗುತ್ತಿರುವ ಬಗ್ಗೆ ಸುಳಿವು ಸಿಕ್ಕಿದೆ. ನಾವು ನಂತರ ಮಹಿಳೆಯನ್ನು ಪತ್ತೆಹಚ್ಚಿದ್ದೇವೆ ಮತ್ತು ಅವಳಿಂದ ದೇಶಿ ನಿರ್ಮಿತ ಪಿಸ್ತೂಲ್‌ ಅನ್ನು ವಶಪಡಿಸಿಕೊಂಡಿದ್ದೇವೆ” ಎಂದು ಅವರು ಹೇಳಿದರು.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳಾ ಪೇದೆಯೊಬ್ಬರು ಆಕೆಯನ್ನು ಪರೀಕ್ಷಿಸಿ, ಅವಳು ಧರಿಸಿದ್ದ ನೀಲಿ ಬಣ್ಣದ ಜೀನ್ಸ್‌ನ ಜೇಬಿನಿಂದ 315 ಬೋರ್ ಕಂಟ್ರಿಮೇಡ್ ಪಿಸ್ತೂಲ್ ಅನ್ನು ಹೊರತೆಗೆದಿದ್ದಾರೆ.

ಯಾದವ್ ಅವರನ್ನು ತಕ್ಷಣವೇ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆ ಆಯುಧವನ್ನು ಏಕೆ ಸಾಗಿಸುತ್ತಿದ್ದಳು ಎಂದು ತಿಳಿಯಲು ಅಧಿಕಾರಿಗಳು ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೈನ್‌ಪುರಿ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸೋಮವಾರಪೇಟೆ : ವಿದ್ಯಾರ್ಥಿನಿ ತಲೆ ಕಡಿದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement