ಪ್ರಧಾನಿ ಮೋದಿ ಬಳಿ ರಕ್ಷಣೆ ಕೋರಿದ ಗ್ಯಾಂಗ್ ರೇಪ್‌ನಿಂದ ಬದುಕುಳಿದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಹಿಳೆ

ಮುಜಫರಾಬಾದ್: ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಮಹಿಳೆ ಈಗ ತನಗೆ ಮತ್ತು ತನ್ನ ಮಕ್ಕಳಿಗೆ ಜೀವ ಬೆದರಿಕೆ ಇರುವ ಕಾರಣ ಆಶ್ರಯ ಮತ್ತು ರಕ್ಷಣೆ ನೀಡಿ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ.

ಭಾವನಾತ್ಮಕ ವೀಡಿಯೊ ಸಂದೇಶದಲ್ಲಿ, ಮಾರಿಯಾ ತಾಹಿರ್, “ನಾನು ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆ. ನನಗೆ ನ್ಯಾಯ ಒದಗಿಸಲು ಪಿಒಕ ಪೊಲೀಸರು, ಸರ್ಕಾರ ಮತ್ತು ನ್ಯಾಯಾಂಗಕ್ಕೆ ಮನವಿ ಮಾಡಿದ್ದರೂ ನನ್ನ ಪ್ರಯತ್ನ ವಿಫಲವಾಗಿವೆ” ಎಂದು ಹೇಳಿದ್ದಾರೆ.
ಈ ವೀಡಿಯೊ ಮೂಲಕ ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರತಕ್ಕೆ ಬರಲು ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದೇನೆ. ನನ್ನ ಮಕ್ಕಳಿಗೆ ಜೀವ ಬೆದರಿಕೆ ಇದೆ. ಸ್ಥಳೀಯ ಪೊಲೀಸರು ಮತ್ತು ಹಿರಿಯ ರಾಜಕಾರಣಿ ಚೌಧರಿ ತಾರಿಕ್ ಫಾರೂಕ್ ಅವರು ನನ್ನನ್ನು ಯಾವಾಗ ಬೇಕಾದರೂ ಕೊಲ್ಲುತ್ತಾರೆ. ನನ್ನ ಮಕ್ಕಳು ಹಾಗೂ ನನಗೆ ಆಶ್ರಯ ಮತ್ತು ರಕ್ಷಣೆ ನೀಡುವಂತೆ ನಾನು ಪ್ರಧಾನಿ ಮೋದಿಯನ್ನು ವಿನಂತಿಸಲು ಬಯಸುತ್ತೇನೆ ಎಂದು ವೀಡಿಯೊದಲ್ಲಿ ಹೇಳಿದ್ದಾರೆ,

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

ಮಾರಿಯಾ 2015 ರಲ್ಲಿ ಸಾಮಾಹಿಕ ಅತ್ಯಾಚಾರದ ಘೋರ ಅಪರಾಧದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮಾಡಲು ಕಚೇರಿಯಿಂದ ಕಚೇರಿಗೆ ಓಡುತ್ತಿದ್ದಾರೆ. ಅವರ ಹಿಂದಿನ ವೀಡಿಯೊದಲ್ಲಿ ಅವರು ಘಟನೆಯನ್ನು ವಿವರಿಸಿದ್ದಾರೆ. “ಹರೂನ್ ರಶೀದ್, ಮಮೂನ್ ರಶೀದ್, ಜಮೀಲ್ ಶಫಿ, ವಕಾಸ್ ಅಶ್ರಫ್, ಸನಮ್ ಹರೂನ್ ಮತ್ತು ಇನ್ನೂ ಮೂವರು ನನ್ನ ವಿರುದ್ಧದ ಅಪರಾಧದಲ್ಲಿ ಭಾಗಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ತಾನು ಪೊಲೀಸ್ ಮತ್ತು ಸ್ಥಳೀಯ ರಾಜಕಾರಣಿಗಳನ್ನು ಸಂಪರ್ಕಿಸಿದರೂ ನ್ಯಾಯ ಪಡೆಯಲು ವಿಫಲಳಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಪಾಕ್ ಆಕ್ರಮಿತ ಕಾಶ್ಮೀರದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಸ್ಥಳೀಯ ಅಧಿಕಾರಿಗಳಿಗೆ ಹಲವು ಪತ್ರಗಳನ್ನು ಬರೆದರೂ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾಳೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅನೇಕ ಅತ್ಯಾಚಾರ ಸಂತ್ರಸ್ತರು ಮತ್ತು ಅವರ ಕುಟುಂಬಗಳು ತಮ್ಮ ಸಮುದಾಯದಿಂದ ದೂರವಿಡಲ್ಪಡುವ ಭಯದಿಂದಾಗಿ ಅಪರಾಧಿಗಳನ್ನು ಸಾರ್ವಜನಿಕವಾಗಿ ಎದುರಿಸಲು ಮುಂದೆ ಬರಲು ಹೆದರುತ್ತಾರೆ ಎಂದು ಅವಳು ಹೇಳಿದ್ದಾಳೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement