ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಪಂಚನಾಮೆ ಪ್ರಕ್ರಿಯೆ ಆರಂಭ : ಐಜಿಪಿ

ಉಡುಪಿ: ಗುತ್ತೇದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ನೀಡಿದ ದೂರಿನ ಪ್ರಕಾರ ಕೆ.ಎಸ್. ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದ್ದು, ಪಂಚನಾಮೆ ಪ್ರಕ್ರಿಯೆ ಆರಂಭವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಹೇಳಿದ್ದಾರೆ.
ಉಡುಪಿಯ ಶಾಂಭವಿ ಲಾಡ್ಜ್ ಗೆ ಬುಧವಾರ ಮತ್ತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತಿರದ ಸಂಬಂಧಿಕರ ಮುಂಭಾಗದಲ್ಲೇ ಎಲ್ಲವನ್ನೂ ಪರಿಶೀಲನೆ ಮಾಡಲಾಗುತ್ತಿದೆ. ಮಣಿಪಾಲದ ಕೆಎಂಸಿ ಆಸ್ಪತ್ರೆ ಮತ್ತು ಮಂಗಳೂರಿನ ಫೋರೆನ್ಸಿಕ್ ತಜ್ಞರು ಜೊತೆಗಿದ್ದಾರೆ. ನಾವು ಈ ಮೊದಲೇ ಅಸಹಜ ಸಾವು ಪ್ರಕರಣ ದಾಖಲು ಮಾಡಿದ್ದೆವು. ನಂತರ ಎಫ್ಐಆರ್ ಪ್ರಕಾರ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. 3ರಿಂದ 4 ಗಂಟೆಗಳ ಕಾಲ ಪ್ರಕ್ರಿಯೆ ನಡೆಯಬಹುದು. ನಾವು ಎಲ್ಲಾ ರೀತಿಯ ಸೂಕ್ತ ತನಿಖೆಗಳನ್ನು ಮಾಡುತ್ತೇವೆ ಎಂದರು.
ಇಂದು ಅವರ ಹತ್ತಿರದ ಸಂಬಂಧಿಕರನ್ನು ತನಿಖೆ ಮಾಡುತ್ತೇವೆ. ತನಿಖೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಪಂಚನಾಮೆಯಲ್ಲಿ ಸಿಕ್ಕ ಮೇಲೆ ಪೂರ್ಣ ಮಾಹಿತಿ ಹೇಳಬಹುದು ಎಂದು ಐಜಿಪಿ ದೇವಜ್ಯೋತಿ ರೇ ತಿಳಿಸಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement