ಸೊರಬ: ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವು

posted in: ರಾಜ್ಯ | 0

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.

ಮದುವೆ ಮುಗಿಸಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತರನ್ನು ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13)ಎಂದು ಗುರುತಿಸಲಾಗಿದೆ.

ಅಲ್ಲದೆ ಅಫಘಾತದಲ್ಲಿ ಗಾಯಗೊಂಡ ಬಸವರಾಜ್, ಹುಚ್ಚರಾಯಪ್ಪ, ಪರಶುರಾಮ, ಕೃಷ್ಣಪ್ಪ, ಜಗದೀಶ, ಚಂದ್ರಪ್ಪ, ಭೀಮಪ್ಪ, ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲಕ ಹನುಮಂತಪ್ಪ ಮತ್ತು ನಿರಂಜನ ಅವರಿಗೆ ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಗರ ಸಮೀಪದ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದವರು ಭೋಜನ ಮುಗಿಸಿ ತವನಂದಿ ಗ್ರಾಮಕ್ಕೆ ವಾಪಸ್​ ಆಗುವ ವೇಳೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ...!
advertisement

ನಿಮ್ಮ ಕಾಮೆಂಟ್ ಬರೆಯಿರಿ