ಅಂಕೋಲಾ: ಬೆಂಕಿ ಹೊತ್ತಿಕೊಂಡು ಒಣಹುಲ್ಲು ಸಾಗಿಸುತ್ತಿದ್ದ ವಾಹನ ಸುಟ್ಟು ಕರಕಲು, ಚಾಲಕನಿಗೆ ಗಾಯ: ದೃಶ್ಯ ಮೊಬೈಲ್‌ನಲ್ಲಿ ಸೆರೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ತಳಗದ್ದೆಯ ಸಮೀಪ ಚಲಿಸುತ್ತಿರುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿ ವಾಹನ ಮತ್ತು ಅದರಲ್ಲಿದ್ದ ಒಣಹುಲ್ಲು ಸುಟ್ಟು ಕರಕಲಾದ ಘಟನೆ ಗುರುವಾರ ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ.

ವಾಹನ ಚಾಲಕ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಬೊಲೆರೋ ಪಿಕಪ್ ವಾಹನದಲ್ಲಿ ಅಂಕೋಲಾದ ತಳಗದ್ದೆಯಿಂದ ಕುಮಟಾದ ಖಂಡಗಾರಕ್ಕೆ ಭತ್ತದ ಒಣಹುಲ್ಲು ಸಾಗಿಸಲಾಗುತ್ತಿತ್ತು. ಮಾರ್ಗಮಧ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶವಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಒಣಹುಲ್ಲಿಗೆ ಹೊತ್ತಿಕೊಂಡ ಬೆಂಕಿ ತಕ್ಷಣವೇ ವಾಹನಕ್ಕೂ ತಗುಲಿದೆ. ವಾಹನದ ಮುಂಭಾಗದಲ್ಲಿಯೂ ಏಕಾಏಕಿ ಹೊತ್ತಿಕೊಂಡಿದ್ದರಿಂದ ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ. ಚಾಲಕನ ಕೈಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದ್ದು, ವಾಹನ ಸುಟ್ಟು ಕರಕಲಾಗಿದೆ.

ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಿದ್ದ ಸ್ಥಳೀಯರು ಬೆಂಕಿನಂದಿಸುವ ಪ್ರಯತ್ನ ನಡೆಸಿದ್ದರಾದರೂ ಪ್ರಯೋಜನವಾಗಿರಲಿಲ್ಲ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಒಣ ಹುಲ್ಲಾಗಿದ್ದ ಕಾರಣಕ್ಕೆ ಬೆಂಕಿ ತಕ್ಷಣವೇ ಹರಡಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement