ಕಾಂಗ್ರೆಸ್ ಮುಖಂಡರ ವಿರೋಧದ ಮಧ್ಯೆಯೂ ಸಂತೋಷ ಪಾಟೀಲ ಅಂತ್ಯಕ್ರಿಯೆ

ಬೆಳಗಾವಿ: ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆಯಿತು.
ಕಾಂಗ್ರೆಸ್ ನಾಯಕರ ಪ್ರತಿಭಟನೆಯ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಸಂತೋಷಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಿದರು. ಪಾರ್ಥಿವ ಶರೀರ ಮನೆಗೆ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಗ್ರಾಮದಲ್ಲಿ ಮದುವೆಗಳಿದ್ದ ಯಾವುದೇ ಕಾರಣಕ್ಕೂ ಶವ ಇಡುವುದು ಬೇಡ, ಆದಷ್ಟು ಬೇಗ ಅಂತ್ಯಕ್ರಿಯೆ ಮುಗಿಸುಸಬೇಕು ಎಂದು ಗ್ರಾಮಸ್ಥರು ಕೋರಿದ್ದರು. ಜೊತೆಗೆ ಮೃತ ಸಂತೋಷ್ ಸಂಬಂಧಿಕರು ಮೃತದೇಹದ ಮುಂದೆ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತಂದು, ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತ್ಯಕ್ರಿಯೆಯೂ ಮುನ್ನ ನಡೆಯುವ ವಿಧಿವಿಧಾನಗಳು ಮುಗಿಯುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಪರಿಹಾರ ಘೋಷಣೆ ಮಾಡಬೇಕು ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಮುಖಂಡರು ಸ್ಥಳಕ್ಕೆ ಬರಬೇಕು ಎಂದು ಶಾಸಕಿ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದರು. ಪರಿಹಾರ ನೀಡಬೇಕು. ಆಗ ಗ್ರಾಮಸ್ಥರು ಇದಕ್ಕೆ ಒಪ್ಪದೆ ನಂತರ ಹೋರಾಡೋಣ, ಆದರೆ ಈಗ ಅಂತ್ಯಕ್ರಿಯೆ ನೆರವೇರಿಸಬೇಕು ಎಂದರು, ಗ್ರಾಮಸ್ಥರ ಮಾತಿಗೆ ಮಣಿದು ನಂತರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement