ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ವಿಚಾರದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ
ಹೇಳಿದ್ದಾರೆ. ಈಶ್ವರಪ್ಪ ರಾಜೀನಾಮೆ ತೀರ್ಮಾನ ಸ್ವಾಗತಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಬರುವವರೆಗೂ ಸಚಿವ ಸ್ಥಾನದ ಜವಾಬ್ದಾರಿ ಬೇಡ ಎಂದು ಈಶ್ವರಪ್ಪ ಬಳಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ನಾನು ನಿರ್ದೋಷಿ. ತನಿಖೆ ನಡೆದು ಸಂಪೂರ್ಣ ಸತ್ಯ ಹೊರಬರುವವರೆಗೂ ಸಚಿವ ಸ್ಥಾನ ಬೇಡ ಎಂದು ಹೇಳಿರುವ ಈಶ್ವರಪ್ಪ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
ಕಾಂಗ್ರೆಸ್ ಒತ್ತಡಕ್ಕೆ ಮಣಿದು ಈಶ್ವರಪ್ಪ ರಾಜೀನಾಮೆ ನೀಡಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ಈಶ್ವರಪ್ಪ ಅವರು ನೈತಿಕತೆ ಆಧಾರದ ಮೇಲೆ ರಾಜೀನಾಮೆ ನೀಡಿದ್ದಾರೆಯೇ ಹೊರತು ಯಾರ ಒತ್ತಡಕ್ಕೂ ಮಣಿದು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆ ಈಗ ಅಧಿಕೃತವಾಗಿ ಆರಂಭವಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಂಶ ಹೊರಗೆಡವಲಿದ್ದಾರೆ. ತಪ್ಪಿತಸ್ಥರಿಗೆ ಖಂಡಿತವಾಗಿಯೂ ಕಾನೂನಿನಡಿ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು, ನಿನ್ನೆವರೆಗೂ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದ ಈಶ್ವರಪ್ಪ ಈಗ ರಾಜೀನಾಮೆ ನೀಡಿರುವುದು ರಾಜ್ಯದ ಜನರಿಗೆ ಸಂದ ಜಯ ಎಂದು ಹೇಳಿದ್ದಾರೆ. ಈಶ್ವರಪ್ಪ ರಾಜೀನಾಮೆ ನೀಡಿದರಷ್ಟೇ ಸಾಲದು, ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ