ಸೀರೆ ನೇಯ್ಗೆ ಘಟಕಕ್ಕೆ ಬೆಂಕಿ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

ವಾರಾಣಸಿ: ಸೀರೆ ನೇಯ್ಗೆ ಘಟಕಕ್ಕೆ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವದಹನವಾದ ಘಟನೆ ವಾರಾಣಸಿಯಲ್ಲಿ ನಡೆದಿದೆ.
ಅಶ್ಫಾಕ್ ನಗರದ ಮನೆಯೊಂದರಲ್ಲಿ ಮದನಪುರದ ವ್ಯಕ್ತಿಯೊಬ್ಬರು ಸೀರೆ ನೇಯ್ಗೆಯಲ್ಲಿ ತೊಡಗಿದ್ದರು. ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, 12*10 ಅಡಿ ಕೊಠಡಿಯಲ್ಲಿ ಕೆಲಸ ಮಾಡಲಾಗುತ್ತಿತ್ತು. ಸಿಂಥೆಟಿಕ್ ಸೀರೆಯ ಫೋಮ್ ಮತ್ತು ಫಿನಿಶಿಂಗ್ ಸಾಮಗ್ರಿಗಳನ್ನು ಕೊಠಡಿಯಲ್ಲಿ ಇರಿಸಲಾಗಿತ್ತು. ಇದಕ್ಕೆ ತಗುಲಿದ ಬೆಂಕಿ ಇಡೀ ಕೋಣೆಯನ್ನು ವ್ಯಾಪಿಸಿದೆ.

ಕೊಠಡಿಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಜೀವವಾಗಿ ದಹನಗೊಂಡಿದ್ದಾರೆ. ಈ ಮನೆ ಕಿರಿದಾದ ಓಣಿಯಲ್ಲಿದ್ದು, ಅಗ್ನಿಶಾಮಕ ದಳ ಆಗಮಿಸುವುದಕ್ಕೂ ಮುನ್ನ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ಹತ್ತಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿದ ಸ್ಥಳೀಯರು ಬೆಂಕಿಗೆ ನೀರು ಹಾಕಿ ನಂದಿಸಿದ್ದಾರೆ. ಅಡುಗೆ ಮಾಡುವಾಗ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ಕುರಿತಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದಾರೆ ಹಾಗೂ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

advertisement

ನಿಮ್ಮ ಕಾಮೆಂಟ್ ಬರೆಯಿರಿ