ಏಪ್ರಿಲ್ 15-16 : ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ, ಹೊಲನಗದ್ದೆ, ಹಿಲ್ಲೂರಿಗೂ ಭೇಟಿ

ಬೆಂಗಳೂರು: ಏಪ್ರಿಲ್ 15 ಮತ್ತು 16ರಂದು ಕಂದಾಯ ಸಚಿವ ಆರ್. ಅಶೋಕ ಅವರು ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಸರ್ಕಾರವೇ ಜನರ ಬಳಿಗೆ ಬಂದು ಸಮಸ್ಯೆ ಆಲಿಸಬೇಕು ಎಂಬ ಉದ್ದೇಶ ಹೊಂದಿರುವ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ.
ಇದು ಆರ್ ಅಶೋಕ್ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿದೆ.

ಅವರು ಈ ಬಾರಿ ಉತ್ತರ ಕನ್ನಡ ಜಿಲ್ಲೆಯ, ಹೊಲನಗದ್ದೆ, ಆಚವೆ, ಹಿಲ್ಲೂರು ಗ್ರಾಮದಲ್ಲಿ ಸಚಿವರು ಸ್ವತಃ ಭಾಗವಹಿಸಲಿದ್ದಾರೆ. ಮೆಟ್ರಿಕ್ ಪೂರ್ವ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಸಚಿವ ಅಶೋಕ ರಾತ್ರಿ ವಾಸ್ತವ್ಯ ಮಾಡಲಿದ್ದಾರೆ. ಸಚಿವರು ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಜನಸ್ಪಂದನ, ಕುಂದು ಕೊರತೆಗಳ ಪರಿಶೀಲನೆ, ಹರಿಕಂತ್ರಕೇರಿಗೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.
ನಂತರ ಸಚಿವರು ಬೆಳಿಗ್ಗೆ 11 ಗಂಟೆಗೆ ಅಚವೆ ಊರಿನ ಕುಂಟಗಣಿ ಗ್ರಾಮದ ಶಾಲಾ ಮೈದಾನದಲ್ಲಿ ವಿವಿಧ ಮಳಿಗೆ ಉದ್ಘಾಟನೆ ಮಾಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಯ ವತಿಯಿಂದ ವಿವಿಧ ಸೌಲಭ್ಯಗಳ ವಿತರಣೆ ಮಾಡಲಿದ್ದಾರೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಸಂಜೆ 4ಗಂಟೆಗೆ ಅಡಿಕೆ ತೋಟಗಳಿಗೆ ಭೇಟಿ ನೀಡಿ, ಅಡಿಕೆ ಕೊನೆ ಕೊಯ್ಯುವ ಪ್ರಾತ್ಯಕ್ಷಿಕೆ, ಹಾಲಕ್ಕಿ ಮಹಿಳೆಯರ ಜಾನಪದ ಹಾಡು, ಜೇನುಕೃಷಿ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7 ಗಂಟೆಗೆ ಸುಗ್ಗಿ, ಪುಗಡಿ , ಯಕ್ಷಗಾನ ಸಹಿತ ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಹಿಲ್ಲೂರಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಬಿಸಿಎಂ ವಸತಿ ನಿಲಯದಲ್ಲಿ ತಂಗಲಿದ್ದಾರೆ.
16 ನೇ ತಾರೀಖಿನಂದು ಬೆಳಿಗ್ಗೆ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ. 10 ಗಂಟೆಗೆ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ಗೌಳಿ ಕಾಲೋನಿಗೆ ಭೇಟಿ ನೀಡಿ, ಕುಂದುಕೊರತೆಗಳ ಕುರಿತು ಜನರೊಂದಿಗೆ ಸಂವಾದ ನಡೆಸಲಿದ್ದಾರೆ.
ಅಧಿಕಾರಿಗಳು 24 ಗಂಟೆಗಳ ಕಾಲ ಹಳ್ಳಿಯಲ್ಲಿಯೇ ಇದ್ದು ಎಲ್ಲ ಅರ್ಜಿಗಳನ್ನು ಕಡ್ಡಾಯವಾಗಿ ಅಲ್ಲಿಯೇ ವಿಲೇವಾರಿ ಮಾಡುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಉದ್ದೇಶ.
ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಹಾಗೂ ಜಿಲ್ಲಾಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement