ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಪೊಲೀಸ್‌ ವಶಕ್ಕೆ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಪದಚ್ಯುತಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸದತ್ತ ಪಾದಯಾತ್ರೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರಾದ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕರ್ನಾಟಕ ಉಸುವಾರು ರನದೀಪ ಸುರ್ಜೆವಾಲಾ ಹಾಗೂ ಇತರರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು, ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿ ಮನೆಗೆ ಕಾಂಗ್ರೆಸ್ ನಾಯಕರು ಘೇರಾವ್ ಹಾಕಲು ಪ್ರತಿಭಟನೆ ಆರಂಭಿಸಿದ್ದರು. ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಕಾಂಗ್ರೆಸ್ ನಾಯಕರಿಂದ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಿನ್ನಲೆಯಲ್ಲಿ ಮುಖ್ಯಮಂತ್ರು ನಿವಾಸದ ಕುಮಾರಕೃಪಾ ರಸ್ತೆಯಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧಗೊಳಿಸಿದ ಪೋಲೀಸರು, ರೇಸ್ ಕೋರ್ಸ್ ರಸ್ತೆಯ ತುಂಬೆಲ್ಲ ಖಾಕಿ ಸರ್ಪಗಾವಲು ಹಾಕಲಾಗಿತ್ತು.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ‌ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾಂಗ್ರೆಸ್‌ ನಾಯಕರು, ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದರು. ಮೂಲಕ ಪ್ರತಿಭಟನೆಗೆ ಚಾಲನೆಗೊಳಿಸಲಾಯಿತು. ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಭವನದಿಂದ ಆಗಮಿಸಿದಂತ ಕಾಂಗ್ರೆಸ್ ನಾಯಕರು, ಮುಖ್ಯಮಂತ್ರು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಪೊಲೀಸ್‌ ಬ್ಯಾರಿಕೇಡ್‌ ದಾಟಲು ಪ್ರಯತ್ನಿಸಿದರು. ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದರು. ಆದರೂ ಕಾಂಗ್ರೆಸ್‌ ನಾಯಕರು ಘೇರಾವ್‌ ಹಾಕಲು ಪ್ರಯತ್ನಿಸಿದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಈ ನಡುವೆ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಯಾವುದೇ ಕ್ರಮ ಕೈಗೊಳ್ಳಲಾಗುವುದು ಎಂದು ಇಂದು ಮುಂಜಾನೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement