ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರ ರಾತ್ರಿ ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಇಬ್ಬರು ಬ್ಯಕ್ತಿಗಳು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಶುಕ್ರವಾರ ಕರ್ನಾಟಕದ ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳ ಹಲವು ಕಡೆ ಏಪ್ರಿಲ್ 18 ರ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement