ಬೆಂಗಳೂರು: ಎಸ್‌ಪಿ ಶೋಭಾ ಕಟಾವ್ಕರ್ ಮನೆಯಲ್ಲಿ ಶವವಾಗಿ ಪತ್ತೆ

posted in: ರಾಜ್ಯ | 0

ಬೆಂಗಳೂರು: ಇತ್ತೀಚಿಗಷ್ಟೇ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹೃದಯಾಘಾತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಒಬ್ಬರೇ ಇದ್ದರು.

ಅವರ ಪುತ್ರ ಇಂದು ಸಂಜೆ ಕಟಾವ್ಕರ್‌ಗೆ ಕರೆ ಮಾಡಿದಾಗ ಅವರು ಫೋನ್ ಸ್ವೀಕರಿಸಿರಲಿಲ್ಲ, ಹೀಗಾಗಿ ಮನೆಯ ಸೆಕ್ಯುರಿಟಿಗೆ ಕರೆ ಮಾಡಿ ವಿಚಾರಿಸಲು ಸೂಚಿಸಿದ್ದರು. ರಾತ್ರಿ 8 ಗಂಟೆಯ ವೇಳೆ ಮನೆಯನ್ನು ಸೆಕ್ಯೂರಿಟಿ ಮನೆಯನ್ನು ಪರಿಶೀಲಿಸಿದಾಗ ಕಟಾವ್ಕರ್ ಸಾವಿಗೀಡಾಗಿರುವುದು ಗಮನಕ್ಕೆ ಬಂದಿದೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ
advertisement

ನಿಮ್ಮ ಕಾಮೆಂಟ್ ಬರೆಯಿರಿ